ಆಗಸ್ಟ್​ 27ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar
Published on

ಬೆಂಗಳೂರು: ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್​ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಚವೆ ಲಕ್ಷ್ಮಿ ಹೆಬ್ಬಾಳ್ಕರ್​ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್​ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ಬಳಿಕ ಮಾತನಾಡಿದ ಸಚಿವೆ ಕಾರ್ಯಕ್ರಮದ ಉದ್ಘಾಟನೆಗೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Laxmi Hebbalkar

ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್​ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಈ ಸಂಬಂಧ ಎಲ್ಲಾ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 11 ಸಾವಿರ ಕಡೆ ಯೋಜನೆಯನ್ನು ಉದ್ಘಾಟಿಸಲು ಉದ್ದೇಶಿಸಲಾಗಿದೆ.

ಪ್ರತಿ ಪಂಚಾಯಿತಿಗೆ ಒಬ್ಬರಂತೆ ನೋಡಲ್​ ಅಧಿಕಾರಿಯನ್ನು ನೇಮಿಸಲಾಗಿದೆ. ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಸಂಬಂಧ ಅಧಿಕಾರಿಗಳ ಜೊತೆ ವಿಡಿಯೋ ​​ಕಾನ್ಫರೆನ್ಸ್​ ನಡೆಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net