More

    ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

    ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.

    ಇದನ್ನೂ ಓದಿ: ಲಂಚ ಪಡೆದು ಎಸ್ಕೇಪ್​ ಆಗುತ್ತಿದ್ದ ಭ್ರಷ್ಟನನ್ನು ಸಿನಿಮಾ ಸ್ಟೈಲ್​ನಲ್ಲಿ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು!

    ಫಲಾನುಭವಿ ಮಹಿಳೆ ಮತ್ತು ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್​ಟಿ ಪಾವತಿದಾರ ಆಗಿರಬಾರದು ಮತ್ತು ಬ್ಯಾಂಕ್​ ಖಾತೆಗೆ ಆಧಾರ್​ ಲಿಂಕ್​ ಕಡ್ಡಾಯವಾಗಿ ಮಾಡಿರಬೇಕು. ಪ್ರಜಾಪ್ರತಿನಿಧಿಗಳು ಮನೆಗೆ ಭೇಟಿ ನೀಡಿದಾಗ ಅವರಿಂದಲೂ ನೋಂದಣಿ ಮಾಡಿಸಿಕೊಳ್ಳಬಹುದೆಂದು ಹೇಳಿದರು.

    ರಾಷ್ಟ್ರೀಯ ನಾಯಕರಿಂದ ಚಾಲನೆ

    ಗೃಹಲಕ್ಷ್ಮೀ ಯೋಜನೆಗೆ ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ ಜು.17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಇಂದು ಮಧ್ಯಾಹ್ನ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದರು.

    ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು

    ಆಗಸ್ಟ್ 15ರಿಂದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್‌.ಟಿ. ಪಾವತಿದಾರರಾಗಿರಬಾರದು. ಪ್ರತಿ ಫಲಾನುಭವಿಯ ನೊಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

    ಮೊಬೈಲ್ ಆ್ಯಪ್ ರಿಲೀಸ್ ಮಾಡಲ್ಲ 

    ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಲ್ಲಿ ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್​ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನೆಯಾಗುತ್ತದೆ. ಸಾರ್ವಜನಿಕರಿಗೆ ಮೊಬೈಲ್ ಆ್ಯಪ್ ರಿಲೀಸ್ ಮಾಡಲ್ಲ ಎಂದರು ಹೇಳಿದರು. ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ/ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಮುಂದೆ ಯಾವುದೇ ದಿನಾಂಕ/ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

    ಇದನ್ನೂ ಓದಿ: ನಿಮ್ಮ ದಿನಚರಿಯಲ್ಲಿ ಈ ಒಂದು ಬದಲಾವಣೆ ಮಾಡಿದ್ರೆ ಸಾಕು ಹೃದಯ, ಲಿವರ್​ ಸದಾ ಆರೋಗ್ಯವಾಗಿರುತ್ತವೆ!

    ಏನಿದು ಗೃಹಲಕ್ಷ್ಮೀ ಯೋಜನೆ?

    ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯು ಮನೆ ಯಜಮಾನಿಗೆ ಉಚಿತ ಹಣ ನೀಡುವ ಯೋಜನೆಯಾಗಿದೆ. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರೋ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ 2000 ರೂ. ನೀಡಲಾಗುತ್ತದೆ. ಒಂದೇ ಮನೆಯಲ್ಲಿ ಅತ್ತೆ-ಸೊಸೆ ಇದ್ದಲ್ಲೆ, ಮನೆಯ ಯಜಮಾನಿ ಯಾರು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಬೇಕು.

    ವಂಶಿಕಾ ಹೆಸರಲ್ಲಿ ವಂಚನೆ ಪ್ರಕರಣ: ಬೆಳಕಿಗೆ ಬರುತ್ತಿದೆ ನಿಶಾ ನರಸಪ್ಪಳ ಒಂದೊಂದೆ ಮೋಸ

    ಬೆಂಗಳೂರಿನಲ್ಲಿ ಕೆಲವೇ ಸೆಕೆಂಡುಗಳಲ್ಲಿ ನಡೆಯಿತು ಕೋಟಿ ರೂ. ದರೋಡೆ!

    ಹಾಲಿವುಡ್‍ನಲ್ಲಿ ಬರಹಗಾರರ ಬಂಡಾಯ! ಸಂಕಷ್ಟಕ್ಕೆ ಸಿಲುಕಿತಾ ಶ್ರೀಮಂತ ಚಿತ್ರರಂಗ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts