22.5 C
Bengaluru
Sunday, January 19, 2020

ಗುರುಪುರ ಸರ್ಕಾರಿ ಶಾಲೆಗೆ ಸಭಾಂಗಣ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಧನಂಜಯ ಗುರುಪುರ

ಪದವಿಪೂರ್ವ ಕಾಲೇಜು ಒಳಗೊಂಡಿರುವ ಗುರುಪುರ ಸರ್ಕಾರಿ ಹೈಸ್ಕೂಲ್ ಕಟ್ಟಡ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಮಿಲಿಟೆಡ್(ಎಂಆರ್‌ಪಿಎಲ್)ನ ಸಿಎಸ್‌ಆರ್ ನಿಧಿಯ 50 ಲಕ್ಷ ರೂ. ಅನುದಾನದಲ್ಲಿ ವಿಸ್ತರಣೆಯೊಂದಿಗೆ ಶಾಲೆಗೆ ವಿಶಾಲ ಸಭಾಂಗಣ ನಿರ್ಮಾಣವಾಗುತ್ತಿದೆ.

ಸ್ವಾತಂತ್ರ್ಯ ಹೋರಾಟಗಾರ ಗುರುಪುರದ ದಿ.ಪದ್ಮನಾಭ ಆಳ್ವರ ಮುಂದಾಳತ್ವ ಹಾಗೂ ಶಿಕ್ಷಣ ಕ್ಷೇತ್ರದ ಸಮಾನ ಮನಸ್ಕರ ಪರಿಶ್ರಮದ ಫಲವಾಗಿ 1958ರಲ್ಲಿ ಗುರುಪುರದಲ್ಲಿ ಹೈಸ್ಕೂಲ್ ಸ್ಥಾಪನೆಯಾಗಿತ್ತು. ಈ ಶಾಲೆಗೆ ಗುರುಪುರ, ವಾಮಂಜೂರು, ತಿರುವೈಲು, ಪಡು, ಕುಡುಪು, ಅಡ್ಡೂರು, ಪೊಳಲಿ, ಕಂದಾವರ, ಗಂಜಿಮಠ ಹೀಗೆ ಸುಮಾರು 10-20 ಕಿ.ಮೀ. ವ್ಯಾಪ್ತಿಯ ಗ್ರಾಮಗಳ ಮಕ್ಕಳು ವಿದ್ಯಾರ್ಜನೆಗೆ ಬರುತ್ತಿದ್ದ ಕಾಲವೊಂದಿತ್ತು. ವರ್ಷಗಳು ಸರಿದಂತೆ ಶಾಲಾ ಕಟ್ಟಡ ಶಿಥಿಲಾವಸ್ಥೆಗೆ ಬಂದಿದ್ದು, ದುರಸ್ತಿಗೆ ಹಾಲಿ ಹಾಗೂ ಹಿಂದಿನ ಶಾಲಾಭಿವೃದ್ಧಿ ಸಮಿತಿ ಚಿಂತಿಸಿತು.

ಹೈಸ್ಕೂಲಿನ ಮುಖ್ಯಶಿಕ್ಷಕಿ ರೂಪಾ ಡಿ.ಎನ್. ಶಾಲಾ ದುರಸ್ತಿಗಾಗಿ ಹೊಸ ಶಾಲಾಭಿವೃದ್ಧಿ ಸಮಿತಿಯ ಗಮನ ಸೆಳೆದರು. ಅದರಂತೆ 2018ರಲ್ಲಿ ಸರ್ಕಾರದಿಂದ ಅನುದಾನ ಪಡೆದು ಕಟ್ಟಡ ದುರಸ್ತಿಗೆ ಸಮಿತಿ ಅಧ್ಯಕ್ಷ ಸತೀಶ್ ಕಾವ ಹಾಗೂ ಸದಸ್ಯರು ಚರ್ಚಿಸಿ, ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಜತೆ ಮಾತುಕತೆ ನಡೆಸಿದರು. ಆ ಹೊತ್ತಿಗಾಗಲೇ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯ ಅನುದಾನ ಇತರ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆಯಾಗಿದ್ದು, ಎಂಆರ್‌ಪಿಎಲ್‌ನೊಂದಿಗೆ ಚರ್ಚಿಸಿ ಅನುದಾನ ಪಡೆಯುವ ಬಗ್ಗೆ ಪ್ರಸ್ತಾವಿಸಿದರು. ಅದರಂತೆ 2019-20ರ ಸಾಲಿನಲ್ಲಿ ಕಂಪನಿಯು ಗುರುಪುರ ಹೈಸ್ಕೂಲಿನಲ್ಲಿ ಸಭಾಂಗಣ ನಿರ್ಮಿಸಲು 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ.

ಪ್ರಗತಿಯಲ್ಲಿ ಕಟ್ಟಡ ಕಾಮಗಾರಿ: ಕಾವೂರಿನ ಮೊಗರೋಡಿ ಕನ್‌ಸ್ಟ್ರಕ್ಷನ್ ಕಂಪನಿ ಹೈಸ್ಕೂಲಿನ ಹಳೇ ಕಟ್ಟಡದ ಮೂರು ತರಗತಿ ಕೊಠಡಿ ಕೆಡವಿ, ಒಂದಷ್ಟು ವಿಸ್ತರಣೆಯೊಂದಿಗೆ ನೂತನ ಸಭಾಗೃಹ ನಿರ್ಮಿಸುತ್ತಿದೆ. ಸದ್ಯ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ತೆರವಾದ ತರಗತಿ ಕೊಠಡಿಗಳಿಗಾಗಿ ಮತ್ತೊಂದು ಹೊಸ ಕಟ್ಟಡ ಹಾಗೂ ಕಲಾ ಮಂಟಪದಲ್ಲಿ ವ್ಯವಸ್ಥೆ ಮಾಡಲಾಗಿದೆ. ನವೆಂಬರ್‌ನಲ್ಲಿ ಆರಂಭಗೊಂಡಿರುವ ಈ ಕಾಮಗಾರಿ ಏಪ್ರಿಲ್‌ನಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇದರ ಸದ್ಬಳಕೆಯಾಗಲಿದೆ.

ಕೆಲವು ವರ್ಷದಿಂದ ಶಾಲಾ ಕಟ್ಟಡ ದುರಸ್ತಿಗಾಗಿ ಪ್ರಯತ್ನಿಸುತ್ತಿದ್ದೆವು. ಸೂಕ್ತ ಅನುದಾನದ ಕೊರತೆಯಿಂದ ನಮ್ಮ ಕೆಲಸ ಕೈಗೂಡಲಿಲ್ಲ. ಈಗ ಎಂಆರ್‌ಪಿಎಲ್ ನಿಧಿಯಲ್ಲಿ ಇಲ್ಲೊಂದು ಸಭಾಂಗಣ ನಿರ್ಮಾಣವಾಗುತ್ತಿದೆ. ಭವಿಷ್ಯದಲ್ಲಿ ಇದರ ಸದ್ಬಳಕೆಯಾಗಲಿದೆ. ಶಾಲೆಯ ಉಳಿದ ಭಾಗದ ದುರಸ್ತಿ ಕಾರ್ಯಕ್ಕೆ ಜಿಪಂ, ತಾಪಂನಿಂದ 4 ಲಕ್ಷ ರೂ. ಅನುದಾನ ಮಂಜೂರಾಗಿದೆ.

ಯಶವಂತ ಆಳ್ವ, ಗುರುಪುರ ಸರ್ಕಾರಿ ಪಿಯು ಕಾಲೇಜು ಅಭಿವೃದ್ಧಿ ಅಧ್ಯಕ್ಷ

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷನಾದ ಸಂದರ್ಭ ಮುಖ್ಯಶಿಕ್ಷಕಿ ರೂಪಾ ಡಿ.ಎನ್. ಶಾಲಾ ಕಟ್ಟಡ ದುರಸ್ತಿ ಬಗ್ಗೆ ಪ್ರಸ್ತಾವಿಸಿದರು. ಅದರಂತೆ ಸರ್ಕಾರದಿಂದ ಹಣ ಪಡೆಯಲು ಸಮಿತಿ ಪ್ರಯತ್ನಿಸಿತು. ಇದೇ ಹೊತ್ತಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಡಾ.ಭರತ್ ಶೆಟ್ಟಿ ಎಂಆರ್‌ಪಿಎಲ್ ಕಂಪನಿಯೊಂದಿಗೆ ಮಾತುಕತೆ ನಡೆಸಿ, ಶಾಲೆಯಲ್ಲಿ ಸಭಾಂಗಣ ನಿರ್ಮಿಸಲು 50 ಲಕ್ಷ ರೂ. ಅನುದಾನ ತೆಗೆಸಿಕೊಟ್ಟಿದ್ದಾರೆ. ಕಂಪನಿ ನಿಧಿಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಭವಿಷ್ಯದಲ್ಲಿ ಇದು ಶಾಲಾ ಮಕ್ಕಳ ಉಪಯೋಗಕ್ಕೂ ಲಭ್ಯವಾಗಲಿದೆ.

ಸತೀಶ್ ಕಾವ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ಶಾಲೆಯ ದುರಸ್ತಿ, ಸಭಾಗೃಹ ಹಾಗೂ ಶಿಕ್ಷಣ ಸಂಸ್ಥೆಯೊಂದಕ್ಕೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡಬೇಕೆಂದುಕೊಂಡಿದ್ದೇನೆ. ನಮ್ಮ ಯೋಜನೆಗಳಿಗೆ ಎಂಆರ್‌ಪಿಎಲ್ ಸಹಿತ ಉಳಿದೆಲ್ಲ ಕಡೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ. ಇದು ಖುಷಿಯ ಸಂಗತಿ.

ರೂಪಾ ಡಿ.ಎನ್., ಮುಖ್ಯಶಿಕ್ಷಕಿ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...