More

  ರೋಣ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಸಿಎಂ ಮನೆ ಮುಂದೆ ಬೆಂಬಲಿಗರ ಧರಣಿ…

  ಬೆಂಗಳೂರು: ಸಂಪೂರ್ಣ ಬಹುಮತವನ್ನು ಈ ಬಾರಿ ಕಾಂಗ್ರೆಸ್ ಪಕ್ಷ ಪಡೆದಿದ್ದು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಈಗಾಗಲೇ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ, ಸಚಿವ ಸ್ಥಾನ ತನಗೂ ಸಿಗಬೇಕು ಎಂದುಕೊಂಡಿರುವ ಶಾಸಕರು, ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಇದೀಗ ರೋಣ ಶಾಸಕ ಜಿ.ಎಸ್ ಪಾಟೀಲರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಕಾರ್ಯಕರ್ತರು ಸಿಎಂ ಮನೆ ಮುಂದೆ ಜಮಾಯಿಸಿದ್ದಾರೆ.

  ಸಿಎಂ ಸಿದ್ದರಾಮಯ್ಯ ಮನೆ ಮುಂದೆ ರೋಣ ಶಾಸಕ ಜಿ‌.ಎಸ್.‌ ಪಾಟೀಲಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡುವ ರೂಪದಲ್ಲಿ ನೂರಾರು ಕಾರ್ಯಕರ್ತರು ಬಂದು ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುತ್ತಿದ್ದಾರೆ.

  ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲಾ ಕೂಡ ಆಗಮಿಸಿದ್ದು ಅವರ ಕಾರನ್ನು ಅಡ್ಡಗಟ್ಟಿ ಜಿ.ಎಸ್ ಪಾಟೀಲಗೆ ಸಚಿವ ಸ್ಥಾನ ನೀಡಬೇಕೆಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ನೂರಾರು ಜೆ.ಎಸ್ ಪಾಟೀಲ ಅಭಿಮಾನಿಗಳು, ತಮ್ಮ ನೆಚ್ಚಿನ ನಾಯಕನೂ ಸಚಿವನಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯ ಮಾಡುತ್ತಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts