More

    ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿ ; ಪ್ರತಿಜ್ಞಾವಿಧಿ ಬೋಧಿಸಿದ ಸಂಸದ ಜಿ.ಎಸ್.ಬಸವರಾಜು ಸಲಹೆ

    ತುಮಕೂರು ; ದಿನ ನಿತ್ಯದ ಬದುಕಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಪ್ರಜ್ಞಾಪೂರ್ವಕವಾಗಿ ದೂರವಾಗಿಸುವ ಮೂಲಕ ಪರಿಸರ ಸಂರಕ್ಷಿಸಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.

    ಪ್ಲಾಸ್ಟಿಕ್ ರಹಿತ ದಿನಾಚರಣೆ ಪ್ರಯುಕ್ತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಶನಿವಾರ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ್ ಮಿಷನ್ ಯೋಜನೆ ಕೈಪಿಡಿ ಮತ್ತು ಸ್ಟಿಕ್ಕರ್ಸ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ಲಾಸ್ಟಿಕ್ ನಿಷೇಧ ಮತ್ತು ಸ್ವಚ್ಛತೆಗೆ ಆದ್ಯತೆ ಕೊಡುತ್ತೇವೆ ಎಂಬ ಪ್ರತಿಜ್ಞಾವಿಧಿ ಬೋಧಿಸಿದರು.

    ಪರಿಸರ ಸಂರಕ್ಷಣೆ ಕೇವಲ ಆಚರಣೆಗೆ ಸೀಮಿತಗೊಳಿಸದೆ ನಿತ್ಯ ಬದುಕಿನ ಮೂಲ ಕರ್ತವ್ಯವನ್ನಾಗಿಸಿಕೊಂಡು ಪರಿಸರ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು ಎಂದರು.

    ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ನಾನಾ ರೋಗಕ್ಕೆ ತುತ್ತಾಗುತ್ತಿರುವ ನಾವು ದೇಶದಲ್ಲಿ 135 ಬಿಲಿಯನ್ ಬೆಲೆ ಬಾಳುವ ಔಷಧ ಸೇವನೆ ವಾಡುತ್ತಿದ್ದೇವೆ. ಇದು ದುರದೃಷ್ಟದ ಸಂಗತಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದರು.

    ಜಿಲ್ಲೆಯಲ್ಲಿ ಸ್ವಚ್ಛತೆಗೆ ಒತ್ತು ಕೊಡಬೇಕು, ಹೆಚ್ಚು ಕಸ ಸಂಗ್ರಹವಾಗುವ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಕಸ ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಬೇಕು. ಹಸಿ ಮತ್ತು ಒಣ ಕಸ ವಿಂಗಡಿಸಿ ವಿಲೇವಾರಿ ವಾಡಬೇಕು. ಅನೈರ್ಮಲ್ಯಕ್ಕೆ ಎಡೆಮಾಡಿಕೊಡಬಾರದು, ಅವೈಜ್ಞಾನಿಕ ಕಸ ವಿಲೇವಾರಿಗೆ ಕಡಿವಾಣ ಹಾಕಬೇಕು, ಆಧುನೀಕರಣ ಬೆಳೆದಂತೆ ಅನಾಗರಿಕರಾಗದೆ ಪ್ರಜ್ಞಾವಂತರಾಗಿ ಸ್ವಚ್ಛತೆ ಕಾಪಾಡಬೇಕು ಎಂದರು.

    ಸರ್ಕಾರ ಜನರ ಶ್ರೇಯೋಭಿವೃದ್ಧಿ ಜತೆಗೆ ಸ್ವಚ್ಛತೆಗೂ ಶ್ರಮಿಸುತ್ತಿದೆ. ಸರ್ಕಾರದ ಸಮಗ್ರ ನೀರಾವರಿ ಯೋಜನೆಯಿಂದಾಗಿ ಜಿಲ್ಲೆಯ ನೀರಿನ ಕೊರತೆ ದೂರವಾಗಲಿದೆ. ಅಲ್ಲದೆ, ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಮೂಲಕ ಗ್ರಾಮದ ಪ್ರತಿ ಮನೆಮನೆಗೂ ಕುಡಿಯುವ ನೀರು ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

    ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಸ್ವಾತಂತ್ರ್ತ್ಯದಷ್ಟೇ ಸ್ವಚ್ಛತೆಯೂ ಮುಖ್ಯವಾಗಿದೆ, ನಾಡಿನ ಅಭಿವೃದ್ಧಿಗೆ ಸ್ವಚ್ಛತೆ ಆದ್ಯತೆಯಾಗಬೇಕು. ಸ್ವಚ್ಛವಾಗಿರುವ ನಾಡು ಅಭಿವೃದ್ಧಿಯಲ್ಲಿಯೂ ಮುಂದಿರುತ್ತದೆ. ಹಾಗಾಗಿ, ನಾವೆಲ್ಲರೂ ಸ್ವಚ್ಛತೆಗೆ ಒತ್ತು ಕೊಟ್ಟು ಪ್ಲಾಸ್ಟಿಕ್ ಮುಕ್ತ ಭಾರತ ನಿರ್ವಾಣಮಾಡಬೇಕು ಎಂದರು. ಜಿಪಂ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಯೋಜನಾಧಿಕಾರಿ ಬಾಲರಾಜು ಇದ್ದರು.

    ಪರಿಸರಕ್ಕೆ ವಾರಕವಾಗಿರುವ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದರೊಂದಿಗೆ ಪರಿಸರವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು, ಪಾಸ್ಟಿಕ್ ಬಳಕೆ ಬದುಕಿನ ಭಾಗವಾಗದೆ ಪರ್ಯಾಯ ವ್ಯವಸ್ಥೆಗೆ ಒಗ್ಗಿಕೊಳ್ಳಬೇಕು.
    ಡಾ.ಕೆ.ವಿದ್ಯಾಕುವಾರಿ ಜಿಪಂ ಸಿಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts