More

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಬದಲಾವಣೆ

    ಶಿವಮೊಗ್ಗ: ಹಾಲಿ ಇರುವ ಜಿಎಸ್‌ಟಿ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ಪ್ರಸ್ತುತ ರಾಜ್ಯದಿಂದ 100 ರೂ. ತೆರಿಗೆ ಪಾವತಿಸಿದರೆ 13 ರೂ. ಮಾತ್ರ ರಾಜ್ಯದ ಪಾಲಿಗೆ ಸಿಗುತ್ತಿದೆ. ಮುಂದೆ ಕೇಂದ್ರದಲ್ಲಿ ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದ ಕೂಡಲೇ ಈಗಿರುವ ಜಿಎಸ್‌ಟಿ ವ್ಯವಸ್ಥೆಯನ್ನು ರದ್ದುಪಡಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದರು.

    ಪ್ರಸ್ತುತ ಜಿಎಸ್‌ಟಿ ವ್ಯವಸ್ಥೆಯಲ್ಲಿ ವಿವಿಧ ಹಂತಗಳಲ್ಲಿ ತೆರಿಗೆ ವಿಧಿಸಲಾಗುತ್ತಿದೆ. ಇದು ಸಂಪೂರ್ಣ ಅವೈಜ್ಞಾನಿಕ. ಕೇವಲ ಎರಡು ಹಂತಗಳ ಜಿಎಸ್‌ಟಿ ವ್ಯವಸ್ಥೆಯನ್ನು ಮುಂದೆ ರೂಪಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡಬೇಕು. ನಮ್ಮ ತೆರಿಗೆ ನಮ್ಮ ಹಕ್ಕು. ಅದನ್ನು ಕೇಳಿದರೆ ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಇನ್ನೊಂದೆಡೆ ಬರ ಪರಿಹಾರಕ್ಕೂ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ದೇಶದಲ್ಲಿ 2004ರ ಸ್ಥಿತಿ ಮರುಕಳಿಸಲಿದೆ. ನಮ್ಮ ಮೈತ್ರಿಕೂಟ ಅಧಿಕಾರ ಪಡೆಯಲಿದೆ. ಬಹುಮತ ಬಂದ ಬಳಿಕ ಪ್ರಧಾನಿ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ. ನಮ್ಮ ಬಗ್ಗೆ ಲೇವಡಿ ಮಾಡಿದವರಿಗೆ ಆ ಮೂಲಕ ಸೂಕ್ತ ಉತ್ತರ ನೀಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಪ್ರತಿಪಕ್ಷಗಳ ಈ ಆರೋಪದಲ್ಲಿ ಹುರುಳಿಲ್ಲ. ಅಪರಾಧಿಗಳನ್ನು ಜಾತಿ, ಧರ್ಮದ ಆಧಾರದಲ್ಲಿ ಕಾಣುವುದಿಲ್ಲ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಜರುಗಿಸಲಾಗುವುದು. ಅಪರಾಧಿಗಳನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts