22.8 C
Bengaluru
Saturday, January 18, 2020

ಬೆಂಗಳೂರು ಟರ್ಫ್ ಕ್ಲಬ್​ನಿಂದ ಜಿಎಸ್​ಟಿ ವಂಚನೆ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಮೇಲೆ ಶುಕ್ರವಾರ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 40 ಖಾಸಗಿ ಬುಕ್ಕಿಗಳನ್ನು ವಶಕ್ಕೆ ಪಡೆದು 96 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ನಗರ ಪೊಲೀಸ್ ಆಯುಕ್ತರು ನಾಮನಿರ್ದೇಶಕರಾಗಿರುವ ಬಿಟಿಸಿಯಲ್ಲಿ ಕೋಟ್ಯಂತರ ರೂ. ಜಿಎಸ್​ಟಿ ವಂಚನೆ ಆಗಿರುವುದು ಸಿಸಿಬಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರೇಸ್ ಕೋರ್ಸ್​ನಲ್ಲಿ ಖಾಸಗಿ ಬುಕ್ಕಿಗಳು ಕುದುರೆ ಪಂದ್ಯಗಳಲ್ಲಿ ಬಾಜಿದಾರರಿಂದ ಸಂಗ್ರಹಿಸಿದ ಹಣಕ್ಕೆ ಸರಿಯಾದ ದಾಖಲೆ ನಿರ್ವಹಿಸದೆ ಸರ್ಕಾರಕ್ಕೆ ಜಿಎಸ್​ಟಿ ವಂಚನೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದಿದ್ದವು.

ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಶುಕ್ರವಾರ ಮಧ್ಯಾಹ್ನ ಇಬ್ಬರು ಡಿಸಿಪಿ, ನಾಲ್ವರು ಎಸಿಪಿ, 20 ಇನ್​ಸ್ಪೆಕ್ಟರ್ ಮತ್ತು ಸಿಬ್ಬಂದಿ ರೇಸ್​ಕೋರ್ಸ್ ಮೇಲೆ ದಾಳಿ ನಡೆಸಿ 20 ಸ್ಟಾಲ್​ಗಳ ಬುಕ್ಕಿಗಳು, ಹಣ, ದಾಖಲೆ, ಕಂಪ್ಯೂಟರ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಬಾಜಿದಾರರಿಂದ ಪಣಕ್ಕೆ ಪಡೆದ ಹಣಕ್ಕೆ ಸರಿಯಾದ ದಾಖಲೆ ನಿರ್ವಹಣೆ ಮಾಡಿರಲಿಲ್ಲ. ಕೋಟ್ಯಂತರ ರೂ. ಜಿಎಸ್​ಟಿ ವಂಚನೆ ಮಾಡಿ ಅಕ್ರಮ ಎಸಗುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೂಜಾಟ ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಿಎಸ್​ಟಿಯನ್ನು ಶೇ.28ಕ್ಕೆ ಹೆಚ್ಚಿಸಿದೆ. ತೆರಿಗೆ ವಂಚನೆ ಉದ್ದೇಶದಿಂದ ಜೂಜಿನಲ್ಲಿ ತೊಡಗಿಸಿದ ಹಣವನ್ನು ಲೆಕ್ಕಕ್ಕೆ ತೋರಿಸದೆ ವಂಚಿಸುತ್ತಿದ್ದರು. ವಶಕ್ಕೆ ಪಡೆದಿರುವ 40 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಅಗತ್ಯ ಎನಿಸಿದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಇದರಲ್ಲಿ ಕ್ಲಬ್ ಮತ್ತು ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ತನಿಖೆಯಲ್ಲಿ ಸ್ಪಷ್ಟವಾಗಬೇಕಿದೆ. ಆರ್ಥಿಕ ಮತ್ತು ತೆರಿಗೆ ವಂಚನೆ ಪ್ರಕರಣವಾದ ಹಿನ್ನೆಲೆಯಲ್ಲಿ ಜಿಎಸ್​ಟಿ, ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ. ಅಗತ್ಯವಿದ್ದರೆ ಅವರ ಮಾರ್ಗದರ್ಶನ ಸಹ ಪಡೆಯಲಾಗುತ್ತದೆ ಎಂದು ವಿವರಿಸಿದರು.

ಅಧಿಕೃತವೇ 13 ಕೋಟಿ ರೂ., ಅಕ್ರಮ ಎಷ್ಟು?

ರೇಸ್ ಇದ್ದಾಗ ಪ್ರತಿದಿನ 4 ರಿಂದ 5 ಕೋಟಿ ರೂ. ಸಂಗ್ರಹವಾಗುತ್ತದೆ. ಸರ್ಕಾರಕ್ಕೆ ಮಾಸಿಕ 13 ಕೋಟಿ ರೂ. ಜಿಎಸ್​ಟಿ ಅಧಿಕೃತವಾಗಿ ಪಾವತಿ ಆಗುತ್ತಿದೆ. ಅನಧಿಕೃತವಾಗಿ ಕೋಟ್ಯಂತರ ರೂ. ವಂಚಿಸುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ತಮಗೆ ಇಲ್ಲಿ ಅಕ್ರಮ ನಡೆಯುತ್ತಿರುವುದು ಗಮನಕ್ಕೆ ಬಂದಿರಲಿಲ್ಲ ಮತ್ತು ಉನ್ನತ ಅಧಿಕಾರಿಗಳು ನಾಮನಿರ್ದೇಶಕರಾಗಿರುವುದರಿಂದ ತಮ್ಮ ದಂಧೆ ಸುರಕ್ಷಿತ ಎಂದು ಅಕ್ರಮ ಎಸಗುತ್ತಿರುವವರು ಭಾವಿಸಿದ್ದರು.

ಆದರೆ, ಇತ್ತೀಚೆಗೆ ಜೂಜು ಕುದುರೆ ಬಿದ್ದು ಗಲಾಟೆ ಆದ ಮೇಲೆ ಅಕ್ರಮದ ಬಗ್ಗೆ ದೂರು ಬಂದಿದ್ದವು. ಉಪಚುನಾವಣೆಯಿಂದಾಗಿ ದಾಳಿ ನಡೆಸಲು ಆಗಿರಲಿಲ್ಲ. ಶುಕ್ರವಾರ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಭಾಸ್ಕರ್ ರಾವ್ ಹೇಳಿದರು.

ಸ್ಟಾಲ್ ಬಾಡಿಗೆ 70 ಸಾವಿರ ರೂ.!

ಕ್ಲಬ್ ಒಳಗೆ ಜಪ್ತಿ ಮಾಡಲಾಗಿರುವ 20 ಖಾಸಗಿ ಸ್ಟಾಲ್​ಗಳ ಮಾಲೀಕರು ಬಿಟಿಸಿಗೆ ಪ್ರತಿ ತಿಂಗಳು 70 ಸಾವಿರ ರೂ. ಬಾಡಿಗೆ ಪಾವತಿಸುತ್ತಿದ್ದಾರೆ. ತಾವು ಕಾನೂನುಬದ್ಧವಾಗಿ ಬಾಜಿದಾರರಿಗೂ ಹಣ ಪಾವತಿಸುತ್ತಿದ್ದೇವೆ ಎಂದು ಸಿಸಿಬಿ ವಿಚಾರಣೆ ವೇಳೆ ಬುಕ್ಕಿಗಳು ಹೇಳಿದ್ದಾರೆ. ಆದರೆ, ಕ್ಲಬ್​ನಲ್ಲಿ 10 ರೂ. ಬಾಜಿ ಕಟ್ಟಿಸಿಕೊಂಡು ಗೆದ್ದವರಿಗೆ 13 ರೂ. ಕೊಡುತ್ತಾರೆ. ಆದರೆ, ಖಾಸಗಿ ಸ್ಟಾಲ್​ಗಳು 10 ರೂ. ಬಾಜಿ ಪಡೆದು ಗೆದ್ದವರಿಗೆ 20 ರಿಂದ 30 ರೂ. ನೀಡುತ್ತಿದ್ದವು. ಇಲ್ಲಿ ತೆರಿಗೆ ವಂಚನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್, ಮ್ಯಾಚ್​ಫಿಕ್ಸಿಂಗ್ ರೀತಿಯಲ್ಲೇ ಕುದುರೆ ಮೇಲೆ ಬಾಜಿ ಕಟ್ಟುವುದರಲ್ಲೂ ದೊಡ್ಡ ಅಕ್ರಮ ನಡೆಯುತ್ತಿದೆ. ಈ ಎಲ್ಲವೂ ಬ್ಯಾನ್ ಆಗುವುದು ಸೂಕ್ತವಾಗಿದೆ.

|ಭಾಸ್ಕರ್ ರಾವ್, ನಗರ ಪೊಲೀಸ್ ಆಯುಕ್ತ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...