ಜಿಎಸ್​​ಟಿ ಇನ್ನಷ್ಟು ದುಬಾರಿ ಸಾಧ್ಯತೆ: ಇಂದು-ನಾಳೆ ಮಂಡಳಿಯ 47ನೇ ಸಭೆ; ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ..

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಪದ್ಧತಿಯಲ್ಲಿ (ಜಿಎಸ್​ಟಿ) ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ನಿರೀಕ್ಷಿಸಲಾಗಿರುವ ಜಿಎಸ್​ಟಿ ಮಂಡಳಿಯ 47ನೇ ಸಭೆ ಚಂಡೀಗಢದಲ್ಲಿ ಮಂಗಳವಾರ ಮತ್ತು ಬುಧವಾರ ನಡೆಯಲಿದೆ. ಕೆಲವು ವಸ್ತುಗಳ ತೆರಿಗೆ ಏರಿಕೆ ಹಾಗೂ ತೆರಿಗೆ ಸ್ಲ್ಯಾಬ್​ಗಳ ವಿಲೀನದ ಬಗ್ಗೆ ನಿರ್ಣಯವಾಗುವ ಸಾಧ್ಯತೆ ಇದೆ. ಸ್ಲ್ಯಾಬ್ ವಿಲೀನವಾದಲ್ಲಿ ಕೆಲ ವಸ್ತುಗಳ ತೆರಿಗೆ ಹೆಚ್ಚಿದರೆ, ಕೆಲವದರ ತೆರಿಗೆ ಈಗಿನದಕ್ಕಿಂತ ಕಡಿಮೆಯಾಗುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ರಾಜ್ಯಗಳಿಗೆ ತೆರಿಗೆ ಸಂಗ್ರಹದಲ್ಲಾಗುತ್ತಿರುವ ಕೊರತೆಗೆ … Continue reading ಜಿಎಸ್​​ಟಿ ಇನ್ನಷ್ಟು ದುಬಾರಿ ಸಾಧ್ಯತೆ: ಇಂದು-ನಾಳೆ ಮಂಡಳಿಯ 47ನೇ ಸಭೆ; ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ..