More

    ​ಅಸ್ತಿತ್ವಕ್ಕಾಗಿ ಬಿಜೆಪಿ ಜೊತೆಗಿನ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ

    ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್​ ಕೋರ್​ ಕಮಿಟಿ ಅಧ್ಯಕ್ಷ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ನಮ್ಮ ಅಸ್ತಿತ್ವಕ್ಕಾಗಿ ಈ ಮೈತ್ರಿ ಅನಿವಾರ್ಯವಾಗಿದೆ ಎಂದಿದ್ದಾರೆ.

    ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಜಿಟಿಡಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿಸಬೇಕು ಎಂಬ ಗುರಿಯೊಂದಿಗೆ ಬಿಜೆಪಿ ಜೊತೆ ಮೈತ್ರಿಗೆ ಹೆಚ್ಚಿನ ಒಲವು ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಲಿ. ಆದರೆ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವಂತೆ ವರಿಷ್ಠರಾದ ಎಚ್​.ಡಿ. ದೇವೇಗೌಡರನ್ನು ಕೋರಿದ್ದೇವೆ. ಇತ್ತೀಚಿಗೆ ನಡೆದ ಪಕ್ಷದ ಸಭೆಯಲ್ಲಿ ಹಾಲಿ-ಮಾಜಿ ಶಾಸಕರು, ವಿಧಾನಪರಿಷತ್​ ಸದಸ್ಯರು, ಮುಖಂಡರು ಸೇರಿದಂತೆ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.

    GT Devegowda

    ಇದನ್ನೂ ಓದಿ: VIDEO| ಮೀಸಲಾತಿ ಸಂಬಂಧ ಸಭೆ ನಡೆಸುತ್ತಿದ್ದ ಸಚಿವರ ಮೇಲೆ ಅರಿಶಿನ ಎರಚಿದ ಪ್ರತಿಭಟನಾಕಾರ

    ಕಾಂಗ್ರೆಸ್​ನವರ ದಬ್ಬಾಳಿಕೆ ಬಗ್ಗೆ ಜನಪ್ರತಿನಿಧಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ರಾಜ್ಯದಲ್ಲಿ ಅಭಿನೃದ್ದಿ ಕಾರ್ಯ ಕುಂಠಿತವಾಗಿದೆ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ನಿಟ್ಟಿನಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿಸಬೇಕಿದೆ. ಆದ್ದರಿಂದ ಪಕ್ಷದ ಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಗೆ ಒಲವು ವ್ಯಕ್ತವಾಗಿದೆ.

    ಕಾಂಗ್ರೆಸ್​ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಈ ಕಾಂಗ್ರೆಸ್​ನವರು. ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ದೇವೇಗೌಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮಗೆಲ್ಲಾ ಧೈರ್ಯ ತುಂಬಿದ್ದಾರೆ ಎಂದು ಜೆಡಿಎಸ್​ ಕೋರ್​ ಕಮಿಟಿ ಅಧ್ಯಕ್ಷ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts