Guarantee: 152 ಅಂಗವಿಕಲರಿಗೆ ಸಿಗದ ಸೌಲಭ್ಯ

Guarantee Meeting

ಕುಮಟಾ: ಜಿಎಸ್‌ಟಿ ಪಾವತಿ ಮಾಡುತ್ತಿರುವವರನ್ನು ಐಟಿ ರಿಟರ್ನ್ ಮಾಡಿದವರು ಎಂದು ಪರಿಗಣಿಸಿ ಗ್ಯಾರಂಟಿ (Guarantee) ಪ್ರಯೋಜನ ಕಡಿತ ಮಾಡಲಾಗಿದ್ದು, ಶೀಘ್ರ ಅಂಥವರ ಪಟ್ಟಿಯೊಡಣೆ ಬೆಂಗಳೂರಿಗೆ ತೆರಳಿ ಸಮಸ್ಯೆ ಬಗೆಹರಿಸೋಣ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸತೀಶ ನಾಯ್ಕ ಹೇಳಿದರು.
ಕುಮಟಾ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ 152 ಜನ ಅಂಗವಿಕಲ ಮತ್ತು ವಿವಿಧ ಕಾಯಿಲೆಗಳ ಕಾರಣ ಅರ್ಹ ಫಲಾನುಭವಿಗಳು ಹಾಸಿಗೆಯಲ್ಲಿದ್ದು, ಅವರಲ್ಲಿ 60 ಜನ ಕುಮಟಾ ತಾಲೂಕಿನಲ್ಲಿಯೇ ಇದ್ದಾರೆ. ಅವರಿಗೆ ಸೌಲಭ್ಯ ಕೊಡಿಸಲು ಅಽಕಾರಿಗಳು ಪ್ರತ್ಯೇಕ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ವರ್ಷಕ್ಕೆ ಏಳೆಂಟು ಸಾವಿರ ಜನ ಪದವಿ ಮುಗಿಸಿ ಹೊರಬೀಳುತ್ತಾರೆ. ಆದರೆ, ಈ ವರೆಗೆ 4236 ಜನ ಮಾತ್ರ ಯುವ ನಿಽ ಯೋಜನೆಯಡಿ ಅರ್ಜಿ ಹಾಕಿದ್ದಾರೆ ಈ ಬಗ್ಗೆ ಕಾಲೇಜ್‌ಗಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.
ಜಿಲ್ಲಾ ಉಪಾಧ್ಯಕ್ಷ ಜನಾರ್ಧನ ಕುಪ್ಪಾ ದೇವಾಡಿಗ, ಕುಮಟಾ ತಾಲೂಕು ಅಧ್ಯಕ್ಷ ಅಶೋಕ ಕೃಷ್ಣ ಗೌಡ, ದಾಂಡೇಲಿ ತಾಲೂಕು ಅಧ್ಯಕ್ಷ ರಿಯಾಜ್ ಅಹಮದ್, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ಕಾಲಮ್ಮನವರ್ ಉಪಸ್ಥಿತರಿದ್ದರು.

https://www.vijayavani.net/banned-plastic-seized

https://www.facebook.com/share/p/18Dg9QMo1f/

Plastic ಅಧಿಕಾರಿಗಳಿಂದ 72 ಕೆಜಿ ಪ್ಲಾಸ್ಟಿಕ್‌ ವಶ

Guarantee ಇದನ್ನೂ ಓದಿ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ Guarantee ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲಾಗಿದೆ.

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಮಮ ಇ 70 ಮಮ ಅ 2023, ಬೆಂಗಳೂರು, ದಿನಾಂಕ: 6ನೇ ಜೂನ್ 2023 ರಂತೆ ಆದೇಶಿಸಿರುತ್ತದೆ.

Guarantee ಗೃಹಲಕ್ಷ್ಮೀ ಯೋಜನೆ  ಮಾರ್ಗಸೂಚಿಗಳು
  • ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ Guarantee ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ. ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 15 ರಿಂದ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
  • ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
  • ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
  • ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
    • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
    • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು
  • Guarantee ಗೃಹ ಜ್ಯೋತಿ ಯೋಜನೆಯ ಮಾರ್ಗಸೂಚಿಗಳು

  • ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರೀಕರಿಗೆ ಒದಗಿಸಲು ದಿನಾಂಕ: 20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ Guarantee ಯೋಜನೆಯಡಿ ಉಚಿತ ವಿದ್ಯುತ್ ಒದಿಸಲು ತಾತ್ವಿಕ ಅನುಮೋದನೆ ನೀಡಿದೆ.“ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸಿ ಬಳಕೆಯ (ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.ಈ ಯೋಜನೆಯನ್ನು ಜುಲೈ 2023 ರ ತಿಂಗಳು ವಿದ್ಯುತ್ ಬಳಕೆಗೆ ಆಗಸ್ಟ್ 2023 ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಸರ್ಕಾರದ ಆದೇಶ ಸಂಖ್ಯೆ: ಎನರ್ಜಿ /164/ಪಿಎಸ್ ಆರ್ / 2023, ದಿನಾಂಕ: 05.06.2023, ಬೆಂಗಳೂರು ರಂತೆ ಆದೇಶಿಸಿದೆ.
    • ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
    • ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.
    • ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸಬೇಕು.
    • ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
    • ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
    • ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.
    • ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.
    • ದಿನಾಂಕ: 30.06.2023 ರ ಅಂತ್ಯಕ್ಕೆ (ಜೂನ್ 2023 ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023 ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರು ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
    • ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳುಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
    • ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.
Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…