ಬೈಂದೂರಿನಲ್ಲಿ ಗ್ಯಾರಂಟಿ ಸಮಿತಿ ಸಂಭ್ರಮ

byn
Published on

ಬೈಂದೂರು: ರಾಜ್ಯ ಸರ್ಕಾರದ ’ಶಕ್ತಿ’ ಯೋಜನೆ ಅನ್ವಯ 500 ಕೋಟಿ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೈಂದೂರಿನ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಸೋಮವಾರ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಅವರು ಬಸ್ ಚಾಲಕ ಮತ್ತು ನಿರ್ವಾಹಕರನ್ನು ಗೌರವಿಸಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾರ್ಯದರ್ಶಿ ಜಗದೀಶ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಸ್.ರಾಜು ಪೂಜಾರಿ, ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯರಾದ ನಾಗರಾಜ್ ಗಾಣಿಗ ಬಂಕೇಶ್ವರ, ಸದಾಶಿವ ಪಡುವರಿ, ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ ಪಡುವರಿ, ಯುವ ಕಾಂಗ್ರೆಸ್ ಅಧ್ಯಕ್ಷ ಭರತ್ ದೇವಾಡಿಗ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಬೈಂದೂರು, ರೈತ ಘಟಕ ವೀರಭದ್ರ ಗಾಣಿಗ, ಗ್ಯಾರಂಟಿ ಸಮಿತಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net