More

  ಬಡವರಿಗೆ ನೆರವಾದ ಗ್ಯಾರಂಟಿ

  • ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಾರಿಗೆ ಬಜೆಟ್ ಮಂಡಿಸಿದ್ದು, ರಾಜ್ಯದ ಜನರಿಗೆ ಭಾಗ್ಯಗಳ ಮೇಲೆ ಭಾಗ್ಯಗಳನ್ನು ನೀಡಿರುವ ಪ್ರಖ್ಯಾತಿ ಅವರದ್ದಾಗಿದೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

  • ವಿಧಾನಸಭೆಯಲ್ಲಿ ಗುರುವಾರ ಬಜೆಟ್ ಉದ್ದೇಶಿಸಿ ಮಾತನಾಡಿದ ಅವರು, ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸರ್ವರಿಗೂ ಸಮಪಾಲು-ಸಮಬಾಳು ಘೋಷವಾಕ್ಯ ಅನುಸರಿಸಿ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. 4 ಕೋಟಿಗೂ ಹೆಚ್ಚು ಜನರಿಗೆ ಈ ಕಾರ್ಯಕ್ರಮ ತಲುಪುತ್ತಿದೆ. ಶೋಷಿತರು ಹಾಗೂ ಮಧ್ಯಮ ವರ್ಗದವರಿಗೆ ನೆರವಾಗಿದೆ ಎಂದರು.

  • ಈ ಬಾರಿಯ ಬಜೆಟ್ ಧ್ವನಿ ಇಲ್ಲದವರಿಗೆ ಧ್ವನಿಯಾಗಿದೆ. ಆರ್ಥಿಕ ಶಿಸ್ತು ಪಾಲಿಸಿ, ಜನಸಾಮಾನ್ಯರಿಗೆ ಯಾವುದೇ ಭಾರ ಹೊರಸದೆ ಸಮತೋಲಿತ ಬಜೆಟ್ ಮಂಡಿಸಿದ್ದಾರೆ. ವಿರೋಧ ಪಕ್ಷದವರು ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನೀಲವ್ವ ಅವರ ಪುತ್ರ ಪ್ರಾಣ ಬಿಡುವಾಗ, ಗೃಹಲಕ್ಷ್ಮಿ ಹಣ ಬರುವಾಗ ನಾನಿಲ್ಲವೆಂದು ಚಿಂತಿಸ ಬೇಡಮ್ಮ, ಗೃಹಲಕ್ಷ್ಮಿ ದುಡ್ಡು ನಿನಗೆ ಬರುತ್ತದೆ ನಿನ್ನ ಕಾಪಾಡುತ್ತದೆ ಎಂದು ತಾಯಿಗೆ ಹೇಳಿದ್ದಾರೆ. ಇದು ಗೃಹಲಕ್ಷ್ಮಿ ಯೋಜನೆ ಎಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

  • ಎರಡೂವರೆ ಲಕ್ಷ ರೂ. ಆದಾಯ ಹೊಂದಿರುವ ವಿದ್ಯಾರ್ಥಿಗಳು ಪದವಿ ಕಾಲೇಜುಗಳಿಗೆ ಮ್ಯಾನೇಜ್‌ಮೆಂಟ್ ಕೋಟದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ನಾಲ್ಕೈದು ವರ್ಷಗಳಿಂದ ವಿದ್ಯಾರ್ಥಿ ವೇತನ ದೊರೆತಿಲ್ಲ. ಇದ್ದರಿಂದ ಮಕ್ಕಳಿಗೆ ಸಮಸ್ಯೆ ಆಗಿದೆ. ಕೇಂದ್ರ ಸರ್ಕಾರ ಈ ನಿರ್ಬಂಧವನ್ನು ಸಡಿಲಗೊಳಿಸಬೇಕು. ಆದಾಯ ಮಿತಿಯನ್ನು ಹೆಚ್ಚಿಸಬೇಕು. ನನ್ನ ಕ್ಷೇತ್ರ ವ್ಯಾಪ್ತಿಯ ಮಾಂಬಳ್ಳಿ ಗ್ರಾಮದ ಬಿಎ ವಿದ್ಯಾರ್ಥಿನಿ ಈಶ್ವರಿ ಹಾಗೂ ಎಂ.ಎ ವಿದ್ಯಾರ್ಥಿನಿ ಶಿಥಲಾ ಎಂಬುವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2019 ರಿಂದ 2022 ರವರೆಗೂ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ. ಇದ್ದರಿಂದ ಅಂಕಪಟ್ಟಿ ದೊರೆಯದೆ ಕಂಗಾಲಾಗಿದ್ದಾರೆ. ಕೆಲಸ ಪಡೆಯಲು ಕಷ್ಟವಾಗಿದೆ. ಆದ್ದರಿಂದ ಈ ಬಗ್ಗೆ ಕೇಂದ್ರ ಸರ್ಕಾರ ಗಮಹರಿಸಬೇಕು ಎಂದು ಒತ್ತಾಯಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts