More

    ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆ ಸಮಾವೇಶ

    ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.14ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
    ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ಯಾರಂಜಿ ಯೋಜನೆ ಸಮಾವೇಶ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸುವ ತಾಲೂಕುವಾರು ಫಲಾನುಭವಿಗಳು ಆಗಮಿಸಲು ಬಸ್ ವ್ಯವಸ್ಥೆ ಮಾಡಬೇಕು. ಜತೆಗೆ ದಿನನಿತ್ಯ ಮಾರ್ಗದಲ್ಲಿ ಹೆಚ್ಚುವರಿ ಬಸ್ ಓಡಿಸಬೇಕು ಎಂದು ತಿಳಿಸಿದರು.
    ಕಾರ್ಯಕ್ರಮ ನಡೆಯುವ ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಬೇಕು. ಸಮಾವೇಸದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮಗಳ ಪಟ್ಟಿ ತಯಾರಿಸಬೇಕು. ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಕುಡಿಯುವ ನೀರು ಒದಗಿಸಲು ಹೆಚ್ಚಿನ ಗಮನ ಹರಿಸಬೇಕು ಎಂದು ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಡಾ.ಶಿವಕುಮಾರ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ತಹಸೀಲ್ದಾರ್ ಸುರೇಶ ವರ್ಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಜಿ.ಪಂ. ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts