ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ

pancha
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ.
Published on

ಪಡುಬಿದ್ರಿ: ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಮಜೂರು ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು ಅಧ್ಯಕ್ಷತೆಯಲ್ಲಿ ಮಜೂರು ಗ್ರಾಪಂ ಸಭಾಭವನದಲ್ಲಿ ಗುರುವಾರ ನಡೆಯಿತು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಗ್ಯಾರಂಟಿ ಯೋಜನೆಗಳ ಅಗತ್ಯತೆ ಮತ್ತು ನ್ಯೂನತೆಗಳ ಬಗ್ಗೆ ವಾತನಾಡಿ ಅಂಗನವಾಡಿ ಮತ್ತು ಅಶಾ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಗ್ರಾಪಂ ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿಸಿಲ್ವ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಗ್ರಾಪಂ ಸದಸ್ಯರಾದ ವನಿತಾ, ಭಾಸ್ಕರ, ಜ್ಯೋತಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸದಸ್ಯರಾದ ಸವಿತಾ ಕುಂದರ್, ಪ್ರಭಾಕರ ಆಚಾರ್ಯ, ರೀನಾ ವಿ.ಡಿಸೋಜ, ರಾಜೇಶ್ ಕುಲಾಲ್, ಸುಧೀರ್ ಎಸ್.ಕರ್ಕೇರ, ಕೀರ್ತಿ ಕುವಾರ್, ರೋಶನ್ ಪೂಜಾರಿ, ಅಂಗನವಾಡಿ ಮೇಲ್ವಿಚಾರಕಿ ಪೂರ್ಣಿವಾ, ಮಜೂರು ಗ್ರಾಮ ಆಡಳಿತ ಅಧಿಕಾರಿ ಶ್ರೀಕಾಂತ್, ಪಾದೂರು ಗ್ರಾಮ ಆಡಳಿತ ಅಧಿಕಾರಿ ಕ್ಲಾರೆನ್ಸ್ ಲೆಸ್ಟರ್ನ್ ಕರ್ನೇಲಿಯೋ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net