More

    ಗ್ಯಾರಂಟಿ ಯೋಜನೆಗಳು ಜನರಿಗೆ ವರ

    ದೇವರಹಿಪ್ಪರಗಿ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಪ್ರದವಾಗಿದ್ದು, ಸಾರ್ವಜನಿಕರಿಗೆ ವರದಾನವಾಗಿವೆ. ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ್ಯಾಂತ ಗ್ಯಾರಂಟಿಗಳ ಜಾಗೃತಿ ಸಭೆ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.

    ತಾಲೂಕಿನ ಹಿಟ್ಟಿನಹಳ್ಳಿ, ಚಿಕ್ಕರೂಗಿ, ಮುಳಸಾವಳಗಿಯಲ್ಲಿ ಶುಕ್ರವಾರ ಸಭೆ ನಡೆಸಿ ಪ್ರವಾಸಿಮಂದಿರದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಅವಶ್ಯವಾಗಿರುವ ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಶಕ್ತಿ ಯೋಜನೆಯಿಂದ ಮಹಿಳೆಯರೆಲ್ಲ ಸಂಚರಿಸಲು ಅನುಕೂಲವಾಗಿದೆ. ಇದರ ಜತೆಗೆ ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಪಡೆಯುವ ಬಗೆ ಕುರಿತು ತಿಳಿಸಲಾಗುವುದು. ಅರ್ಜಿ ಹಾಕಲು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಈ ಸಭೆಗಳನ್ನು ಏರ್ಪಡಿಸಲಾಗಿದೆ. ನಮ್ಮೆಲ್ಲ ಪದಾಧಿಕಾರಿಗಳು ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಈ ಸಲ ಅತಿಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿ ಹೊಂದಲಾಗಿದೆ ಎಂದರು.

    ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ, ಬ್ಲಾಕ್ ಅಧ್ಯಕ್ಷ ಬಶೀರಹಮ್ಮದ ಬೇಪಾರಿ ಮಾತನಾಡಿ, ಸರ್ಕಾರ ಜನಹಿತ ಬಯಸುವುದರೊಂದಿಗೆ ಪ್ರತಿಯೊಬ್ಬರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಸೂಕ್ತ ರೀತಿಯಲ್ಲಿ ಯೋಜನೆ ತಲುಪಿಸಲು ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

    ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಸಂತೋಷಗೌಡ ದೊಡ್ಡಮನಿ, ಮಹಿಳಾ ಬ್ಲಾಕ್ ಅಧ್ಯಕ್ಷೆ ಸರಿತಾ ನಾಯಿಕ, ಯುವ ಕಾಂಗ್ರೆಸ್ ಅಧ್ಯಕ್ಷ ಮುನೀರ್ ಬಿಜಾಪುರ, ಕಾಸಪ್ಪ ಜಮಾದಾರ, ನಜೀರ್ ಬೀಳಗಿ, ಸುರೇಶಗೌಡ ಬಿರಾದಾರ, ಎಂ.ಎಂ. ಪಾಟೀಲ, ಮಲ್ಲು ಜಮಾದಾರ, ಪ್ರಕಾಶ ಗುಡಿಮನಿ, ರಾಜು ಮೆಟಗಾರ, ಸುನೀಲ ಕನಮಡಿ, ಅಕ್ಬರ ಬಾಗವಾನ, ಕಾಶೀನಾಥ ಬಜಂತ್ರಿ, ಪ್ರಕಾಶ ಮಲ್ಹಾರಿ, ಮುರ್ತುಜ ತಾಂಬೋಳಿ, ನಬಿ ಮಣೂರ, ಮಕಬುಲ್ ಬಾಗವಾನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts