More

    ಕಾಂಗ್ರೆಸ್​, ಗ್ಯಾರಂಟಿ ಯೋಜನೆ ಬಳಸಿ ಮತದಾರರಿಗೆ ಆಮಿಷ ಒಡ್ಡಿದ ಆರೋಪ; ನಾಳೆ ಹೈಕೋರ್ಟ್​ನಲ್ಲಿ ವಿಚಾರಣೆ

    ಬೆಂಗಳೂರು: ಕೆಲ ದಿನಗಳಿಂದ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಆಮಿಷ ಒಡ್ಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ಕುರಿತಾಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮಾತನಾಡಿ ಸಿದ್ದರಾಮಯ್ಯ ಜನರಿಗೆ ಲಂಚ ನೀಡಿದ್ದಾರೆ ಎನ್ನುವ ರೀತಿಯ ಆರೋಪ ಮಾಡಿದ್ದರು.

    ಇದನ್ನೂ ಓದಿ: ಗ್ಯಾರಂಟಿ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿಕೆ 

    ಈ ಹಿಂದೆ ವಿಚಾರ ಸಂಕೀರಣವೊಂದರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, “ರಾಜ್ಯ ಸರ್ಕಾರ ನೀಡಿರುವ ಫ್ರೀ ಗ್ಯಾರಂಟಿ ಯೋಜನೆಯ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತದೆ. ಮಹಿಳೆಯರು ಫ್ರೀ ಬಸ್‌ನಲ್ಲಿ ಹೊರಟರೇ ಗಂಡಸರು ಮತ್ತೊಂದು ಬಸ್‌ನಲ್ಲಿ ಹೊರಡಬಹುದು ಎನ್ನಿಸುತ್ತದೆ. ಅತ್ತೆ ಮತ್ತು ಸೊಸೆ ನಡುವೆ ಜಗಳ ಕೂಡ ಆಗಬಹುದು. ಆರ್ಥಿಕ ಪರಿಸ್ಥಿತಿ ಬಹಳ ಗಂಭೀರವಾಗಬಹುದು. ಈಗಾಗಲೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದಾರೆ. ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಫ್ರೀ ಯೋಜನೆ, ಗ್‌ಟಿ ಕೊಡುವುದು ನನ್ನ ಪ್ರಕಾರ ಲಂಚ” ಎಂದಿದ್ದರು.

    ಇದನ್ನೂ ಓದಿ: ಕಾಂಗ್ರೆಸ್​ನ ಈ ಗ್ಯಾರಂಟಿಗೆ ‘ಗೃಹಲಕ್ಷ್ಮಿ’ ಎಂದು ಹೆಸರು ಕೊಟ್ಟಿದ್ಯಾರು?

    ಆ ಸಂದರ್ಭದಲ್ಲಿ ಅವರು “ಹೊಸ ಸರ್ಕಾರಗಳು ಬಂದಾಗ ಹಳೆ ಸರ್ಕಾರದ ಭ್ರಷ್ಟಾಚಾರ ತನಿಖೆ ಮಾಡುತ್ತೇವೆ. ಬಳಿಕ ತನಿಖೆಯು ಇಲ್ಲ, ವರದಿ ಮೇಲೆ ಕ್ರಮವು ಇಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಇದು ಮತದಾರರನ್ನ ಮಂಕುಗೊಳಿಸುವ ಪ್ರಯತ್ನ. ಅಂತಹ ಮಾತುಗಳ ಬದಲು ಅದನ್ನ ಪೂರೈಸಬೇಕು. ಯಾರು ರಾಜ್ಯಕ್ಕೆ, ರಾಷ್ಟ್ರಕ್ಕೆ ಮೋಸ ಮಾಡಿದ್ದಾರೆ. ಅವರನ್ನ ನ್ಯಾಯಾಲಯದ ಮೆಟ್ಟಿಲನ್ನು ಏರಿಸಲೇಬೇಕು. ವಿರೋಧ ಪಕ್ಷವೆಂದು ಸುಮ್ಮನೆ ಆರೋಪ ಮಾಡುತ್ತಾರೆ ಎನ್ನುವುದು ಸರಿಯಲ್ಲ” ಎಂದು ಹೇಳಿದ್ದರು.

    ಇದನ್ನೂ ಓದಿ: ಪ್ರಸ್ತುತ ಆದಾಯಕ್ಕಾಗಿ ರಾಜಕಾರಣವೇ ಹೊರತು ಸೇವೆಗಲ್ಲ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ವಿಷಾಧ

    ಗ್ಯಾರೆಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಪ್ರಮೀಳಾ ನೇಸರ್ಗಿ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಇದೀಗ ಹೈಕೋರ್ಟ್ ನ್ಯಾಯಾಧೀಶ ಸುನಿಲ್ ದತ್, ಪ್ರಕರಣದ ವಿಚಾರಣೆಯನ್ನು ನಾಳೆಗೆ ನಿಗದಿಪಡಿಸಿದ್ದಾರೆ. ಹೀಗಾಗಿ ಗ್ಯಾರೆಂಟಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ (ಜು.28) ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts