

ಬಂಟ್ವಾಳ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಬಾಳ್ತಿಲ, ಗೋಳ್ತಮಜಲು, ವೀರಕಂಭ ಬೋಳಂತೂರು ಗ್ರಾಮಗಳನ್ನು ಒಳಗೊಂಡು ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಬೋಳಂತೂರು ಗ್ರಾ.ಪಂ ಕಚೇರಿಯಲ್ಲಿ ನಡೆಯಿತು.
ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ಗ್ರಾಮದ ಬಡವರಿಗೂ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನ ದೊರೆಯಬೇಕು ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಶಯ. ಬಂಟ್ವಾಳ ತಾಲೂಕಿನಲ್ಲಿ ಒಟ್ಟು 10 ವಲಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಮುಖ್ಯ ಅತಿಥಿಯಾಗಿ ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ಶುಭಹಾರೈಸಿದರು. ಬೋಳಂತೂರು ಗ್ರಾ.ಪಂ ಅಧ್ಯಕ್ಷೆ ಶಾಲಿನಿ ಉದ್ಘಾಟಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಯಾಕುಬ್, ಗ್ರಾ.ಪಂ. ಸದಸ್ಯರಾದ ಚಂದ್ರಶೇಖರ್ ರೈ, ಅಶ್ರಫ್, ಅನ್ಸಾರ್, ಹಿತಾ ಶೆಟ್ಟಿ, ಮಹಾಲಕ್ಷ್ಮೀ, ಅನಿತಾ, ಸಂಧ್ಯಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯರಾದ ನಾರಾಯಣ ನಾಯ್ಕ, ಅಲೆಸ್ಟರ್, ಪ್ರಮುಖರಾದ ವಿಶ್ವಜೀತ್ ರೈ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಐಡಾ ಸುರೇಶ್, ಕಾಂಚಾಲಕ್ಷಿ, ಅಬ್ದುಲ್ ಕರೀಂ, ಕೃಷ್ಣಪ್ಪ ಪೂಜಾರಿ, ವಿನಯ್ ಕುಮಾರ್ ಸಿಂಧ್ಯಾ, ಸಿರಾಜ್ ಮದಕ, ಹರ್ಷನ್ ಬಿ., ಚಂದ್ರಶೇಖರ್ ಆಚಾರ್ಯ, ಸತೀಶ್ ಕೆ. ಉಪಸ್ಥಿತರಿದ್ದರು. ಬೋಳಂತೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ವಂದಿಸಿದರು.