More

  ಗ್ಯಾರಂಟಿಗಳು ಅರ್ಹರಿಗೆ ಸಮರ್ಪಕವಾಗಿ ತಲುಪಲಿ: ಗೋಪಾಲಕೃಷ್ಣ ಬೇಳೂರು

  ಸಾಗರ: ರಾಜಕೀಯದಲ್ಲಿ ಬದ್ಧತೆ, ನಿಷ್ಠೆಯನ್ನು ಕಾಪಾಡಿಕೊಂಡು ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುನ್ನಡೆಸಿಕೊಂಡು ಬಂದಿರುವ ಬಿ.ಆರ್.ಜಯಂತ್ ಅವರ ಸಾಮಾಜಿಕ ಕಾಳಜಿ ಇಂದಿನ ಯುವಕರಿಗೆ ಮಾದರಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
  ಪಟ್ಟಣದಲ್ಲಿ ಶುಕ್ರವಾರ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ನೂತನ ಅಧ್ಯಕ್ಷರಾಗಿ ನೇಮಕವಾದ ಬಿ.ಆರ್.ಜಯಂತ್ ಅವರನ್ನು ಸನ್ಮಾನಿಸಿ ಮಾತನಾಡಿದರು.
  ಜಯಂತ್ ಅವರ ಜನಪರ ಕಾಳಜಿ ಮತ್ತು ಸಮಾಜ ಸೇವೆ ಎಲ್ಲರಿಗೂ ಮಾದರಿ. ಇತ್ತೀಚೆಗೆ ವೈಯಕ್ತಿಕ ಕಾರಣಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಮಾರ್ಗದರ್ಶನ, ಸೇವೆ ನಮಗೆ ಅತ್ಯಂತ ಅವಶ್ಯಕ. ಈ ಹಿನ್ನೆಲೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ತಾಲೂಕಿನಲ್ಲಿ ಜಾರಿಯಾಗಲು ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನಮುಖಿಯಾಗಿವೆ. ಕೆಲವರು ಲೇವಡಿ ಮಾಡುತ್ತಿದ್ದಾರೆ. ತಾಂತ್ರಿಕ ಕಾರಣದಿಂದ ಕೆಲವು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಅದನ್ನು ಶೀಘ್ರದಲ್ಲೇ ಸರಿಮಾಡುತ್ತೇವೆ. ಶಕ್ತಿ ಯೋಜನೆಯಡಿ ಕೋಟಿಗಟ್ಟಲೆ ಫಲಾನುಭವಿಗಳು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳು ಬಡವರಿಗೆ ವರದಾನವಾಗಿದೆ. ಜನರ ಕೆಲಸ ಮಾಡಲು ಸಣ್ಣ ಹುದ್ದೆ, ದೊಡ್ಡ ಹುದ್ದೆ ಎನ್ನುವ ಆಲೋಚನಾ ಕ್ರಮ ಬೇಕಿಲ್ಲ. ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದರು. ಸಾಗರ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ನಗರಾಸಭಾ ಸದಸ್ಯರಾದ ಮರಿಯಾ ಲೀಮಾ, ಮಧುಮಾಲತಿ, ಅಬ್ದುಲ್ ಹಮೀದ್, ವಿ. ಶಂಕರ್, ರವಿ ಲಿಂಗನಮಕ್ಕಿ, ಚಂದ್ರಪ್ಪ, ಸರಸ್ವತಿ ನಾಗರಾಜ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts