21 C
Bengaluru
Thursday, January 23, 2020

ಆರು ವರ್ಷದ ಬಾಲಕಿಯನ್ನು ಕೊಂದು ಅತ್ಯಾಚಾರ ಮಾಡಿದ್ದ ಆರೋಪಿ ಪೊಲೀಸರ ಮುಂದೆ ಹೇಳಿದ್ದೇನು?

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಹರಿದ್ವಾರ(ಉತ್ತರಖಂಡ್​): ಆರು ವರ್ಷದ ಬಾಲಕಿಯನ್ನು ಕೊಲೆಗೈದ ಆರೋಪದಲ್ಲಿ ಬಂಧಿಯಾಗಿದ್ದ ವ್ಯಕ್ತಿಯೊಬ್ಬ ಕೊಲೆ ಬಳಿಕ ಬಾಲಕಿಯ ಮೃತದೇಹದೊಂದಿಗೆ ಅತ್ಯಾಚಾರ ನಡೆಸಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹರಿದ್ವಾರದ ಗ್ರಾಮವೊಂದರ ಸ್ಲಂ ಬಳಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ ಬಾಲಕಿ ಶುಕ್ರವಾರ ನಾಪತ್ತೆ ಆಗಿದ್ದಳು. ಸ್ಥಳೀಯ ಕೋಳಿ ಸಾಕಣೆ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸೋನು, ಬಾಲಕಿಯನ್ನು ಪುಸಲಾಯಿಸಿ ಪಕ್ಕದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದ. ಈ ವೇಳೆ ಬಾಲಕಿ ಕಿರುಚುವುದನ್ನು ಕಂಡು ಆಕೆಯನ್ನು ಕೊಲೆ ಮಾಡಿ, ಬಳಿಕ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹರಿದ್ವಾರದ ಹಿರಿಯ ಪೊಲೀಸ್​ ಅಧೀಕ್ಷಕ ಜನ್ಮೇಜಯ ಖಂದೂರಿ ಬಾಲಕಿ ಕೊಲೆಗೆ ಸಂಬಂಧಿಸಿದ ಬಲವಾದ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದೇವೆ ಎಂದು ತಿಳಿಸಿದ್ದಾರೆ.

ಮೃತ ಬಾಲಕಿಯೊಂದಿಗೆ ಆಡುತ್ತಿದ್ದ ಬಾಲಕಿಯೊಬ್ಬಳು ಕೂಡ ಕೊನೆ ಘಳಿಗೆಯಲ್ಲಿ ಆರೋಪಿ ಜತೆ ಆಕೆಯನ್ನು ನೋಡಿದ್ದಾಗಿ ಹೇಳಿದ್ದಾಳೆ. ಆರೋಪಿ ಕೂಡ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಸಾಕ್ಷ್ಯಾಧಾರ ಕೂಡ ಆತನ ಕೈವಾಡವನ್ನು ಬಲಪಡಿಸಿದೆ ಎಂದು ಜನ್ಮೇಜಯ ಖಂದೂರಿ ಮಾಹಿತಿ ನೀಡಿದ್ದಾರೆ. ಸೆಕ್ಯೂರಿಟಿ ಗಾರ್ಡ್​ ಆಗಿ ಕಾರ್ಯನಿರ್ಹಿಸುತ್ತಿದ್ದ ಆರೋಪಿಯನ್ನು ಮಂಪರು ಪರೀಕ್ಷೆಗೂ ಕೂಡ ಒಳಪಡಿಸಲಾಗಿತ್ತು. ಅಲ್ಲದೆ, ಸಾಕ್ಷ್ಯಾಧಾರವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕಿಯ ಪಾಲಕರು ದಿನಗೂಲಿ ನೌಕರರಾಗಿದ್ದು, ಉತ್ತರ ಪ್ರದೇಶದ ಬಂಜೂರ್​ನಿಂದ ಹರಿದ್ವಾರದ ಗ್ರಾಮಕ್ಕೆ ಆಗಮಿಸಿದ್ದರು. ಅವರು ಕೆಲಸ ಮಾಡುವ ಸುಮಾರು 600 ಮೀಟರ್​ ದೂರದಲ್ಲೇ ಬಾಲಕಿಯ ಕೊಲೆ ನಡೆದಿತ್ತು. ಬಾಲಕಿಯ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿ, ಆತನನ್ನು 14 ದಿನ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿತ್ತು.​ (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...