More

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​​ನತ್ತ ಮುಖ ಮಾಡಿದ ಗುಬ್ಬಿ ಶ್ರೀನಿವಾಸ್‌

    ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆಯವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ.

    ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು. ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ ಮಾರುತ್ತಿರುವ ವೈದ್ಯರು; ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ! 

    ರಾಜೀನಾಮೆ ನೀಡಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾರ್ಚ್ 30ಕ್ಕೆ ನಾನು ಅಧೀಕೃತವಾಗಿ ಕಾಂಗ್ರೆಸ್ ಸೇರುತ್ತೇನೆಂದು ಹೇಳಿದ್ದಾರೆ.

    ಇದನ್ನೂ ಓದಿ: VIDEO | ಸನ್ನಿ ಲಿಯೋನ್ ಜೊತೆ ಪೋಸ್ ನೀಡಿದ ಉರ್ಫಿ ಜಾವೆದ್​​!
    ಶಿವಲಿಂಗೇಗೌಡ, ಎಟಿ ರಾಮಸ್ವಾಮಿ ಕೂಡ ಕಾಂಗ್ರೆಸ್​ಗೆ ಸೇರುತ್ತಾರೆಂದು ಹೇಳಿದ್ದಾರೆ. ಗುಬ್ಬಿಯಲ್ಲಿ ಎಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿ ಇದ್ದಾರೆ. ಅವರ ಬೆಂಬಲದೊಂದಿಗೆ ಗುಬ್ಬಿಯಿಂದ ಕಾಂಗ್ರೆಸ್ ನಿಂದ ಗೆಲ್ಲುವ ವಿಶ್ವಾಸ ಹೊಂದಿದ್ದೇನೆ ಎಂದು ನುಡಿದಿದ್ದಾರೆ.

    22ನೇ ವಯಸ್ಸಿನಿಂದ ಇಲ್ಲಿಯವರೆಗೂ 203 ಯುನಿಟ್ ರಕ್ತದಾನ; ಗಿನ್ನೆಸ್ ದಾಖಲೆಗೆ ಸೇರಿದ 80 ವರ್ಷದ ವೃದ್ಧೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts