ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ, ಕಾಮಗಾರಿಗೆ ದಿನೇಶ್ ಗುಂಡೂರಾವ್ ಚಾಲನೆ

dinesh
Published on

ಬೆಂಗಳೂರು : ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವಾರ್ಡ್ ಸಂಖ್ಯೆ 109ರ ಪಿಳ್ಳಪ್ಪ ಲೈನ್ ರಸ್ತೆಗೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ರೈಲು , ರಾಜ್ಯ ಸಾರಿಗೆ, ನಗರ ಸಾರಿಗೆ ಬಸ್ ನಿಲ್ದಾಣಗಳು ಇವೆ. ರಾಜ್ಯದ ವಿವಿಧೆಡೆ, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಪ್ರತಿದಿನ ಆಗಮಿಸುತ್ತಾರೆ. ವ್ಯಾಪಾರಸ್ಥರು, ಸ್ಥಳೀಯ ನಿವಾಸಿಗಳು ಎಲ್ಲರಿಗೂ ಸುಸಜ್ಜಿತ ಮೂಲಭೂತ ವ್ಯವಸ್ಥೆ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಚಿಕ್ಕ ರಸ್ತೆಗಳು ಹೆಚ್ಚಾಗಿವೆ. ಅವುಗಳನ್ನು ಡಾಂಬರೀಕರಣ ಮಾಡಲು ಸಾಧ್ಯವಿಲ್ಲ. ಅದ್ದರಿಂದ ಸಣ್ಣ ರಸ್ತೆಗಳಿಗೆ ಕಾಂಕ್ರೀಟ್ ರಸ್ತೆಗಳಾಗಿ ಮಾಡಲಾಗುತ್ತಿದೆ. ಕಾಂಕ್ರೀಟ್ ರಸ್ತೆಗಳು 15 ರಿಂದ 20 ವರ್ಷಗಳ ಬಾಳಿಕೆ ಬರುತ್ತವೆ. ಆದ್ದರಿಂದ ಸಾರ್ವಜನಿಕರ ತೆರಿಗೆ ಹಣವೂ ಉಳಿಯುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ರಾಮಚಂದ್ರ , ಕಾಟನ್‌ಪೇಟೆ ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್‌ಮೂರ್ತಿ, ಚಿಕ್ಕಪೇಟೆ ವಾರ್ಡ್ ಅಧ್ಯಕ್ಷ ಚಿನ್ನು ಮಣಿ, ಗುತ್ತಿಗೆದಾರರಾದ ಚಂದ್ರಮೋಹನ್ ಹಾಗೂ ಕಾಂಗ್ರೆಸ್ ಮುಖಂಡರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net