More

    ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ

    ಕಡೂರು: ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರದ ಆದೇಶದನ್ವಯ ಗೌರವಧನ ಹೆಚ್ಚಿಸುವಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಸೋಮವಾರ ಶಾಸಕ ಕೆ.ಎಸ್.ಆನಂದ್ ಅವರಿಗೆ ಮನವಿ ಸಲ್ಲಿಸಿದರು.
    ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಡಿ.ಎಸ್.ಲೋಕೇಶ್ ಮಾತನಾಡಿ, ಸರ್ಕಾರ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ವಾರಕ್ಕೆ 10 ಗಂಟೆಗಳ ಅವಧಿಗೆ ಮಾಸಿಕ 12 ಸಾವಿರ ರೂ. ವೇತನ ನೀಡುತ್ತಿದೆ. ಆದರೆ ನಾವು ವಾರದಲ್ಲಿ 20 ಗಂಟೆ ಕಾಲ ಕಾರ್ಯನಿರ್ವಹಿಸುತ್ತಿದ್ದು ಮಾಸಿಕ ಕೇವಲ 12 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ 10 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ 24 ಸಾವಿರ ರೂ. ಗೌರವಧನ ನೀಡಿದರೆ ಸಹಕಾರಿಯಾಗಲಿದೆ ಎಂದು ಒತ್ತಾಯಿಸಿದರು.
    ಅತಿಥಿ ಉಪನ್ಯಾಸಕರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ 12 ಸಾವಿರ ರೂ. ವೇತನ ನೀಡಬೇಕಿದೆ. ಪ್ರತಿ ತಿಂಗಳು 5ನೇ ತಾರೀಖಿನೊಳಗಾಗಿ ಗೌರವಧನ ನೀಡಬೇಕಿದೆ. 2022-23ರಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ತೀರ್ಮಾನಿಸಿರುವ ಗೌರವಧನವನ್ನೂ ನೀಡಿರುವುದಿಲ್ಲ. ಈ ಬಾರಿ ಮಾರ್ಚ್ ತಿಂಗಳ ಗೌರವಧನವನ್ನು ನೀಡಬೇಕಿದೆ ಎಂದು ಮನವಿ ಮಾಡಿದರು.
    ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಜಿ.ಎನ್.ಮೂರ್ತಿ, ಹನುಮಂತಪ್ಪ, ಎಲ್.ಎಂ.ಪರಮೇಶ್, ಹೇಮಂತ್, ಗಿರೀಶ್, ಪ್ರವೀಣ್, ಶಶಿ, ರೂಪಾ, ಶೈಲಜಾ, ರಮ್ಯಾ, ಸಂತೋಷ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts