More

    ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಖಚಿತ

    ಗಂಗಾವತಿ: ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಬೇಡಿಕೆಗಳ ಈಡೇರಿಕೆಗೆ ಚಳಿಗಾಲ ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆಯಲಾಗುವುದು ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

    ಇದನ್ನೂ ಓದಿ: ಬೇಡಿಕೆ ಈಡೇರಿಕೆಗೆ ಅತಿಥಿ ಉಪನ್ಯಾಸಕರ ಆಗ್ರಹ

    ನಗರದ ಶಾಸಕರ ಗೃಹಕಚೇರಿಯಲ್ಲಿ ಅತಿಥಿ ಉಪನ್ಯಾಸಕರ ಸಂಘದಿಂದ ಶನಿವಾರ ಆಯೋಜಿಸಿದ್ದ ಕುಂದು-ಕೊರತೆಗಳ ಸಭೆಯಲ್ಲಿ ಮಾತನಾಡಿದರು. ನೇಮಕ, ಬೇಡಿಕೆ ಮತ್ತು ಕರ್ತವ್ಯದ ಆದೇಶ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

    ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಸಿಎಂ ಅನ್ನು ಒತ್ತಾಯಿಸಲಾಗುವುದು. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಉಪನ್ಯಾಸಕರು ಗಮನಹರಿಸಬೇಕಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಂಘದ ತಾಲೂಕು ಅಧ್ಯಕ್ಷ ಪಂಚಾಕ್ಷರಯ್ಯಸ್ವಾಮಿ ಹಿರೇಮಠ ಮಾತನಾಡಿ, ಸರ್ಕಾರಿ ಪದವಿ ಕಾಲೇಜುಗಳ ನಿರ್ವಹಣೆ ಅತಿಥಿ ಉಪನ್ಯಾಸಕರಿಂದ ನಡೆಯುತ್ತಿದೆ. ಇದುವರೆಗೂ ಸೇವಾಭದ್ರತೆ ಬಗ್ಗೆ ಸರ್ಕಾರ ಯೋಚಿಸುತ್ತಿಲ್ಲ.

    ಶೈಕ್ಷಣಿಕ ವರ್ಷದಿಂದ ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ನೇಮಿಸಿಕೊಂಡು, ಕರ್ತವ್ಯಕ್ಕೆ ಹಾಜರಾಗುವಂತೆ ಮೌಖಿಕ ಸೂಚನೆ ನೀಡಿದೆ. ಕಾರ್ಯಭಾರ ಮತ್ತು ಸಂಬಳದ ಬಗ್ಗೆ ಯಾವುದೇ ಸ್ಪಷ್ಟತೆ ನೀಡಿಲ್ಲ. ಪರೀಕ್ಷೆ, ಮೌಲ್ಯಮಾಪನ ಕಾರ್ಯ, ತರಗತಿ ನಡೆಯುತ್ತಿದ್ದರೂ, ಉಪನ್ಯಾಸಕರ ಶೋಷಣೆ ತಪ್ಪುತ್ತಿಲ್ಲ.

    ಅಧಿಕಾರಿಗಳ ಅವೈಜ್ಞಾನಿಕ ನಿರ್ಧಾರ ಉಪನ್ಯಾಸಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು. ಸಂಘದ ಪದಾಧಿಕಾರಿಗಳಾದ ಎ.ಕೆ.ಮಹೇಶ್ ಕುಮಾರ್, ಶಾಹೀನ್ ಕೌಸರ್, ಅಜೀಜ್, ಪಾಂಡುರಂಗ ಅಗ್ನಿಹೋತ್ರಿ, ರಾಘವೇಂದ್ರ, ವಿನಯ್ ಪತ್ರಿಮಠ, ಎಸ್.ಎ.ಖಾದ್ರಿ, ರೇಣುಕಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts