More

    ಸೇವಾ ಭದ್ರತೆ ಒದಗಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆ ; ತರಗತಿ ಬಹಿಷ್ಕರಿಸಿದ ಅತಿಥಿ ಉಪನ್ಯಾಸಕರು

    ತುಮಕೂರು: ಸೇವಾ ಭದ್ರತೆ, ಬಾಕಿ ವೇತನ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ತುಮಕೂರಿನಲ್ಲಿಯೂ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದರು.

    ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಶುಕ್ರವಾರ ತರಗತಿ ಬಹಿಷ್ಕರಿಸಿದ ಅತಿಥಿ ಉಪನ್ಯಾಸಕರು, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಸಂಘದ ಮುಖಂಡ ಎಂ.ಟಿ.ಮಲ್ಲಿಕಾರ್ಜುನ್ ಮಾತನಾಡಿ, ದಶಕಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸರ್ಕಾರ ಇದುವರೆಗೆ ಯಾವುದೇ ಸೇವಾ ಭದ್ರತೆಯನ್ನು ಒದಗಿಸಿಲ್ಲ, ಕಳೆದ ವರ್ಷದವರೆಗೂ ಒಂಭತ್ತು ತಿಂಗಳವರೆಗೆ ನೀಡುತ್ತಿದ್ದ ಸಂಬಳ ಮೂರು ತಿಂಗಳಿಗೊಮ್ಮೆ, ಕಾಂಟ್ರಾಕ್ಟ್ ರಿನೀವಲ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರನ್ನು ಅತಂತ್ರಗೊಳಿಸುತ್ತಿದ್ದಾರೆ ಎಂದರು.

    ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದಾಗಲೂ ಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತದೆಯೇ ಹೊರತು, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಿಲ್ಲ, ಅತಿಥಿ ಉಪನ್ಯಾಸಕರನ್ನು ಕಡೆಗಣಿಸುತ್ತಿದ್ದು, ರಾಜ್ಯದಲ್ಲಿರುವ ಎಲ್ಲ ಅತಿಥಿ ಉಪನ್ಯಾಸಕರ ಸಂಘಗಳು ಒಗ್ಗೂಡಿ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದ್ದು, ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವವರೆಗೆ ತರಗತಿಗೆ ಹಾಜರಾಗುವುದಿಲ್ಲ ಎಂದರು.

    ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವವರೆಗೆ ಹೋರಾಟ ಮುಂದುವರಿಯಲಿದ್ದು, ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವ ಕಡೆ ಸರ್ಕಾರ ಗಮನ ಹರಿಸಬೇಕು, ಅತಿಥಿ ಉಪನ್ಯಾಸಕರನ್ನು ಗುಲಾಮರಂತೆ ನೋಡುವುದನ್ನು ಬಿಟ್ಟು ಗೌರವಯುತವಾಗಿ ನಡೆಸಿಕೊಳ್ಳಬೇಕೆಂದು ಎಂದು ಸಿ.ಕೆ.ಮಂಜುನಾಥ್ ಒತ್ತಾಯಿಸಿದರು. ಅತಿಥಿ ಉಪನ್ಯಾಸರಾದ ಚೇತನ್, ಗೀತಾ, ಮಲ್ಲಿಕಾರ್ಜುನ್, ಅರುಣ್‌ಕುಮಾರ್ ಮತ್ತಿತರರು ನೇತೃತ್ವ ವಹಿಸಿದ್ದರು.

    ಬೀದಿಗಿಳಿದು ಹೋರಾಟದ ಎಚ್ಚರಿಕೆ: ತುಮಕೂರು ಪದವಿ ಕಾಲೇಜಿನಲ್ಲಿ 160ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದು, ಸೇವಾ ಭದ್ರತೆ, ವೇತನ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿಲ್ಲ, ಸರ್ಕಾರ ಸರಿಯಾಗಿ ಸ್ಪಂದಿಸುವವರೆಗೆ ನಿರಂತರವಾಗಿ ಹೋರಾಟ ಮಾಡಲಾಗುವುದು. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸದೇ ಹೋದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅತಿಥಿ ಉಪನ್ಯಾಸಕ ಅಂಜನಮೂರ್ತಿ ಎಚ್ಚರಿಸಿದರು. ಕಳೆದ ವರ್ಷ 9 ತಿಂಗಳ ಅವಧಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದ್ದ ಸರ್ಕಾರ ಈ ವರ್ಷದ ಅವಧಿಯಲ್ಲಿ ಬರೀ ತಿಂಗಳಿಗೆ ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದ್ದು, ಯಾವುದೇ ಜೀವನ ಭದ್ರತೆ ಇಲ್ಲದೇ ಅತಿಥಿ ಉಪನ್ಯಾಸಕರು ಬದುಕುವಂತಹ ಸ್ಥಿತಿ ನಿರ್ಮಾಣ ಮಾಡಿದ್ದಾರೆ, ಮೂರು, ಆರು ತಿಂಗಳಿಗೊಮ್ಮೆ ಸಂಬಳ ನೀಡುವ ಮೂಲಕ ಅತಂತ್ರ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ತಿಂಗಳಿಗೊಮ್ಮ ವೇತನ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts