More

    ‘ಇದು ಹೃದಯಹೀನ ಸರ್ಕಾರ…’ ಎಂದು ರಾಜ್ಯದ ವಿರುದ್ಧ ಕಿಡಿಕಾರಿದ ಬಿಜೆಪಿ ಎಂಎಲ್​ಸಿ

    ಶಿವಮೊಗ್ಗ: ಕರೊನಾ ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರ ಬಾಕಿ ಗೌರವ ಧನ ತಕ್ಷಣ ಬಿಡುಗಡೆ ಮಾಡದಿದ್ದರೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧವೇ ಧ್ವನಿ ಎತ್ತುವ ಅಥವಾ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಂಎಲ್‌ಸಿ ಆಯನೂರು ಮಂಜುನಾಥ ಎಚ್ಚರಿಕೆ ನೀಡಿದರು.

    ಲಾಕ್‌ಡೌನ್ ಬಳಿಕ ಅತಿಥಿ ಉಪನ್ಯಾಸಕರ ಬದುಕು ಮೂರಾಬಟ್ಟೆಯಾಗಿದೆ. ಗೌರವಯುತ ಹುದ್ದೆಯಲ್ಲಿದ್ದವರು ಆರ್ಥಿಕ ತೊಂದರೆಗೆ ಸಿಲುಕಿ ಬೀದಿಯಲ್ಲಿ ತರಕಾರಿ, ಹಣ್ಣು ಮಾರಾಟ ಹಾಗೂ ಕೂಲಿ ಕೆಲಸ ಮಾಡುವ ಸ್ಥಿತಿಗೆ ತಲುಪಿದ್ದಾರೆ. ಇದು ಸರ್ಕಾರಕ್ಕೆ ನಾಚಿಗೇಡಿನ ಸಂಗತಿ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು. ಇದನ್ನೂ ಓದಿರಿ ‘ಬಿಜೆಪಿಯಲ್ಲಿ ಯಡಿಯೂರಪ್ಪಗೆ ಮತ್ತೊಬ್ಬ ಪ್ರತಿಸ್ಪರ್ಧಿಯೇ ಇಲ್ಲ’

    ಮನುಷ್ಯತ್ವವನ್ನೇ ಮರೆತಿರುವ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪನ್ಯಾಸಕರ ಗೌರವಧನ ಬಿಡುಗಡೆಗೆ ತಾಂತ್ರಿಕ ಕಾರಣ ನೀಡುತ್ತಿದ್ದಾರೆ. ಸೃಜನಶೀಲತೆ ಕಳೆದುಕೊಂಡಿದ್ದು ಹೃದಯಹೀನ ಸರ್ಕಾರ ಇದು. ಆಡಳಿತ ಪಕ್ಷ ಎಂಬ ಕಾರಣಕ್ಕೆ ಮೌನವಾಗಿ ಸರ್ಕಾರದ ಗಮನ ಸೆಳೆಯುತ್ತಿದ್ದೇನೆ. ಆದರೆ ಮೌನ ನನ್ನ ದೌರ್ಬಲ್ಯವಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಅಧಿವೇಶನ ನಡೆಯುವಾಗ ಸಾವಿರಾರು ಅತಿಥಿ ಉಪನ್ಯಾಸಕರೊಂದಿಗೆ ವಿಧಾನಸೌಧದ ಎದುರು ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಆಯನೂರು ಮಂಜುನಾಥ ಎಚ್ಚರಿಸಿದರು.

    ಗೌರವಧನ ಬಿಡುಗಡೆ ಸಂಬಂಧ ಈಗಾಗಲೇ ಮೂರು ಬಾರಿ ಸಿಎಂ ಬಿ.ಎಸ್.ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಹಲವು ಬಾರಿ ಪತ್ರ ಬರೆದಿದ್ದೇನೆ. ಆದರೂ ಮಾರ್ಚ್‌ನಿಂದ ಗೌರವಧನ ಬಿಡುಗಡೆ ಮಾಡುತ್ತಿಲ್ಲ. ಕರೊನಾತಂಕ ಇದ್ದರೂ ಪರೀಕ್ಷೆ, ಮೌಲ್ಯಮಾಪನ, ಆನ್‌ಲೈನ್ ಪಾಠ ಹಾಗೂ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಅಸಂಘಟಿತ ಕಾರ್ಮಿಕರನ್ನು ಬದುಕಿಸಲು ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ನೆರವು ನೀಡಿತು. ಆದರೆ ಈ ಉಪನ್ಯಾಸಕರಿಗೆ ವೇತನ ನೀಡಲು ಸರ್ಕಾರದಲ್ಲಿ ಹಣ ಇಲ್ಲ ಎಂದು ಕುಟುಕಿದರು.

    ‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

    ಪಕ್ಷಾಂತರ ಗುಮ್ಮ ಮತ್ತೆ ಬಂತು! ಜೆಡಿಎಸ್​ ತೊರೆದು ‘ಕೈ’ ಹಿಡಿಯಲು ಕ್ಷಣಗಣನೆ

    ಜಿಲ್ಲಾಡಳಿತದ ವಿರುದ್ಧ ಶಾಸಕಿ ಆಕ್ರೋಶ, ಏಕಾಂಗಿಯಾಗಿ ಹೋರಾಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts