ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

guest-teacher-muttu-hadagali
Published on

ಗದಗ: ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹತ್ಯೆಗೈದು ಇಬ್ಬರು ಶಿಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮೃತ ಬಾಲಕನ ತಾಯಿ, ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು(ಗುರುವಾರ) ಮೃತಪಟ್ಟಿದ್ದಾರೆ.

ಕೊಲೆ ಆರೋಪಿ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿಯನ್ನು ಪೊಲೀಸರು ಮೊನ್ನೆ(ಡಿ.20) ಬಂಧಿಸಿದ್ದಾರೆ. ಗೀತಾ ಬಾರಕೇರ್ ಕೂಡ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಗೀತಾ ಬಾರಕೇರ ಪುತ್ರ ಭರತ್​ ಬಾರಕೇರ ಅದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಡಿ.19ರಂದು ಶಾಲಾ ಆವರಣದಲ್ಲೇ ಬಾಲಕನನ್ನು ಕೊಂದು ಗೀತಾ ಬಾರಕೇರ ಮತ್ತು ಸಹ ಶಿಕ್ಷಕ ಸಂಗನಗೌಡ ಪಾಟೀಲ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.

ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗೀತಾರನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಚಿಕಿತ್ಸೆ ಫಲಿಸಿದೆ ಗುರುವಾರ ಕೊನೆಯುಸಿರೆಳೆದಿದ್ದಾರೆ. ಸಂಗನಗೌಡ ಪಾಟೀಲ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net