More

    ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ವಿಶೇಷ ಪರಿಹಾರ ನೀಡಲು ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಸಮಿತಿ ಒತ್ತಾಯ

    ರಾಯಚೂರು: ವಿವಿಧ ಶಿಕ್ಷಣ ಸಂಸ್ಥೆ, ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ವಿಶೇಷ ಪರಿಹಾರ ನೀಡುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಡಿಸಿ ಕಚೇರಿ ಸ್ಥಾನಿಕ ಅಧಿಕಾರಿ ಆಸೀಫ್ ಮೂಲಕ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ಮಹಾಮಾರಿ ಕರೊನಾದಿಂದ ದೇಶಾದ್ಯಂತ ಹಲವು ವೃತ್ತಿಗಳು ಸಂಕಷ್ಟಕ್ಕೆ ಸಿಲುಕಿವೆ. ಮೂರು ತಿಂಗಳು ಲಾಕ್‌ಡೌನ್ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ವರ್ಗದವರು ಯಾವುದೇ ಸಹಾಯವಿಲ್ಲದೆ ಜೀವನ ಸಾಗಿಸಲು ಪರದಾಡುವಂತಹ ಸ್ಥಿತಿಗೆ ತಲುಪಿದ್ದಾರೆ ಎಂದು ಅಳಲು ತೋಡಿಕೊಂಡರು.

    ಶಾಲಾ ಕಾಲೇಜುಗಳು ಆರಂಭವಾಗಲು ಇನ್ನೂ ಹಲವಾರು ದಿನಗಳು ಆಗಬಹುದು. ಈ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಕಾರಣ ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ವರ್ಗದವರಿಗೆ ಸೂಕ್ತ ಪರಿಹಾರ ಕಲ್ಪಿಸಿ, ಬಡ ಕುಟುಂಬಗಳ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಲು ಆಗ್ರಹಿಸಿದರು. ಸಮಿತಿ ಜಿಲ್ಲಾಧ್ಯಕ್ಷ ರಾಘವೇಂದ್ರ, ಪದಾಧಿಕಾರಿಗಳಾದ ರಾಜಶೇಖರ ಮಾಚರ್ಲಾ, ಎಚ್.ಕೆ.ರವಿಕುಮಾರ್, ಜಿ.ಗಂಗಾಧರ್, ಕೆ.ಮಲ್ಲೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts