23.2 C
Bangalore
Saturday, December 14, 2019

ದಕ್ಷಿಣ ವಲಯ ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಗುವಿವಿ ರನ್ನರ್ ಅಪ್

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಕಲಬುರಗಿ: ತಿರುಪತಿಯ ಪದ್ಮಾವತಿ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ವಲಯ ಅಂತರ್ ವಿವಿ ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಗುಲ್ಬರ್ಗ ವಿವಿ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯಲ್ಲಿ ರನ್ನರ್ ಆಗಿ ಹೊರಹೊಮ್ಮಿದೆ.
ಜತೆಗೆ ಒಟ್ಟು ಎಂಟು ಬಹುಮಾನಗಳನ್ನು ಪಡೆದುಕೊಳ್ಳುವ ಮೂಲಕ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಲಘು ಸಂಗೀತದಲ್ಲಿ ಶ್ರೀಧರ ಹೊಸಮನಿ ಪ್ರಥಮ, ಕಾರ್ಟೂನ್ ಮೇಕಿಂಗ್​ನಲ್ಲಿ ಬೀದರನ  ಅರುಣ ಬಿ.ಆರ್. ಪ್ರಥಮ, ರಂಗೋಲಿಯಲ್ಲಿ ಎಂ.ಎಂ.ಕೆ. ಕಾಲೇಜ್ ಆಫ್ ವಿಜ್ಯುವಲ್ ಆರ್ಟ್ ವಿದ್ಯಾರ್ಥಿನಿ ಅಂಕಿತಾ ಎಂ. ಪ್ರಥಮ, ಕ್ಲೇ-ಮಾಡಲಿಂಗ್ನಲ್ಲಿ ವಿಜ್ಯುವಲ್ ಆರ್ಟ್ ವಿಭಾಗದ ವಿವಿ ವಿದ್ಯಾರ್ಥಿ ನವೀನಕುಮಾರ ದ್ವಿತೀಯ, ಮೆಹಂದಿಯಲ್ಲಿ ಎಂ.ಎಂ.ಕೆ. ಕಾಲೇಜಿನ ಅಂಕಿತಾ ಎಂ. ದ್ವಿತೀಯ, ಶಾಸ್ತ್ರೀಯ ವಾದ್ಯ ಸಂಗೀತದಲ್ಲಿ ಗುರುಕುಲ ಕಾಲೇಜಿನ ಮಣಿಕಂಠ ಕುಲಕರ್ಣಿ ತೃತೀಯ, ಸ್ಪಾಟ್ ಪೋಟೊಗ್ರಫಿಯಲ್ಲಿ ಚನ್ನಾ ಆರ್ಟ್ ಕಾಲೇಜಿನ ಅರುಣ ಬಿ.ಆರ್. ತೃತೀಯ, ಪ್ರತಿಷ್ಠಾಪನಾ ಕಲೆಯಲ್ಲಿ ಗುಲ್ಬರ್ಗ ವಿವಿ ದೃಶ್ಯಕಲಾ ವಿಭಾಗದ ನವೀನಕುಮಾರ, ಕಿರಣಕುಮಾರ, ಹಣಮಂತ ಸಿ. ಮತ್ತು ಎಂ.ಎಂ.ಕೆ. ಕಾಲೇಜಿನ ಮಜಿಥಿಯ ರುದ್ರ ಜೆ. ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ವಿವಿ ಕುಲಪತಿ ಪ್ರೊ.ಎಸ್.ಆರ್. ನಿರಂಜನ್, ಕುಲಸಚಿವ ಪ್ರೊ.ಸಿ. ಸೋಮಶೇಖರ, ಕುಲಸಚಿವ (ಮೌಲ್ಯಮಾಪನ) ಪ್ರೊ.ಡಿ.ಎಂ. ಮದರಿ, ವಿತ್ತಾಧಿಕಾರಿ ಪ್ರೊ.ರಾಜನಾಳ್ಕರ್ ಲಕ್ಷ್ಮಣ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ.ಕೆ. ಸಿದ್ದಪ್ಪ, ಪುರುಷ ತಂಡದ ವ್ಯವಸ್ಥಾಪಕ ಡಾ.ಆನಂದ ನಾಯಕ, ಮಹಿಳಾ ತಂಡದ ವ್ಯವಸ್ಥಾಪಕಿ ಡಾ.ವಿಶ್ವೇಶ್ವರಿ ತಿವಾರಿ ಹರ್ಷ ವ್ಯಕ್ತಪಡಿಸಿದ್ದಾರೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...