More

    ಗುರಿ ಸಾಧನೆಗೆ ಬೇಕು ಮಾರ್ಗದರ್ಶನ

    ಚಿಕ್ಕಮಗಳೂರು: ವಿದ್ಯಾರ್ಥಿಗಳು ಗುರು-ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆದಾಗ ಗುರಿ ಸಾಧನೆ ಸಾಧ್ಯ ಎಂದು ಮರ್ಲೆ ಶಂಕರದೇವರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.

    ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆವಿಎಸ್ ಶಾಲೆಯಿಂದ ಶುಕ್ರವಾರ ಏರ್ಪಡಿಸಿದ್ದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಅಕ್ಷರ ಜ್ಞಾನ ಉಂಟಾಗಬೇಕೆಂಬ ನಿಟ್ಟಿನಿಂದ ಪಾರಂಪರಿಕವಾಗಿ ನಡೆಸಿಕೊಂಡು ಬರುತ್ತಿರುವ ಅಕ್ಷರಾಭ್ಯಾಸ ಮಾದರಿ ಎಂದರು.
    ವೈಜ್ಞಾನಿಕ ಆಧಾರದ ಮೇಲೆ ಧರ್ಮದ ಪ್ರಕಾರ ಮಗು ಗರ್ಭಾವಸ್ಥೆಯಲ್ಲಿರುವ 6 ತಿಂಗಳಲ್ಲಿ ಪರಿಪೂರ್ಣ ಚಿತ್ರಣ, 7ನೇ ತಿಂಗಳಿಗೆ ಜ್ಞಾನ ಉಂಟಾಗುತ್ತದೆ. ಅಂಥ ಸಂದರ್ಭದಲ್ಲಿ ಹಿರಿಯರು ಸೀಮಂತ ಮಾಡಿ ಹರಸುತ್ತಾರೆ. ಭಾರತೀಯ ಸಂಸ್ಕೃತಿ ಜಗತ್ತಿಗೇ ಜ್ಞಾನ ನೀಡುತ್ತಿದೆ ಎಂದು ಹೇಳಿದರು.
    ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಜೆವಿಎಸ್ ಶಾಲೆಯನ್ನು ಸಮಾಜ ಸೇವೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಶಾಲೆಯಲ್ಲಿ ಎಲ್ಲ ವರ್ಗದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆಧುನಿಕ ಕಾಲಕ್ಕೆ ತಕ್ಕಂತೆ ಶಾಲೆಯಲ್ಲಿ ಸ್ಮಾರ್ಟ್ ಬೋರ್ಡ್ ಅಳವಡಿಸುವುದರ ಜತೆಗೆ ತಜ್ಞ ಶಿಕ್ಷಕರಿಂದ ಶಿಕ್ಷಣ ನೀಡಲಾಗುತ್ತಿದೆ ಎಂದರು.
    ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಸಿ.ಪ್ರಕಾಶ್, ಉಪಾಧ್ಯಕ್ಷ ಲಕ್ಷ್ಮಣ ಗೌಡ, ಶಾಲಾ ಕಾರ್ಯದರ್ಶಿ ಕೆ.ಕೆ.ಮನುಕುಮಾರ್, ಮುಖ್ಯಶಿಕ್ಷಕ ವಿಜಿತ್, ಸಿಇ ಕುಳ್ಳೇಗೌಡ, ವ್ಯವಸ್ಥಾಪಕ ರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts