More

    ನ.8ರಿಂದ ಎಲ್‌ಕೆಜಿ-ಯುಕೆಜಿ ಆರಂಭ; ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಯಲ್ಲಿ ನಿಯಮ ಏನೇನಿದೆ ನೋಡಿ..

    ಬೆಂಗಳೂರು: ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲೆ ಆರಂಭಿಸಿದ ಬೆನ್ನಲ್ಲೇ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ. ರಾಜ್ಯದಲ್ಲಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿರುವ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಭೌತಿಕವಾಗಿ ನ.8ರಂದು ಆರಂಭಿಸಲು ಶಾಲೆಗಳಿಗೆ ಸೂಚನೆ ನೀಡಿದೆ.

    ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನು ಸಹ ಇಲಾಖೆ ಬಿಡುಗಡೆ ಮಾಡಿದೆ. ನ.8ರಿಂದ ಅಂಗನವಾಡಿಗಳು ಆರಂಭ ಆಗುತ್ತಿರುವುದರಿಂದ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸಹ ಅರಂಭಿಸಲು ಅನುಮತಿ ನೀಡಬೇಕೆಂದು ಖಾಸಗಿ ಶಾಲೆಗಳು ಸರ್ಕಾರದ ಮೇಲೆ ಒತ್ತಡ ತಂದಿದ್ದವು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಶಾಲೆ ಆರಂಭಕ್ಕೆ ಗುರುವಾರ ಪ್ರತ್ಯೇಕ ಸುತ್ತೋಲೆ ಹೊರಡಿಸಿದೆ.
    ಕರೊನಾ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ತರಗತಿಗಳನ್ನು ಆರಂಭಿಸಲು ಅವಕಾಶ ನೀಡಿದೆ. ಶಾಲೆಗಳನ್ನು ಸ್ಯಾನಿಟೈಸ್ ಮಾಡಬೇಕು. ಶಾಲೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪಾಲಕರಿಂದ ಒಪ್ಪಿಗೆ ಪತ್ರ ಪಡೆಯವುದು ಕಡ್ಡಾಯವಾಗಿದೆ.

    ಸಮಯ ಏನು?: ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ನಿರ್ವಹಣೆಗೆ ಸಲಹಾತ್ಮಕ ವೇಳಾಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಆ ಪ್ರಕಾರವಾಗಿ ಸೋಮವಾರದಿಂದ ಶುಕ್ರವಾರದವರೆಗೆ ಬೆ.9.30ರಿಂದ ಮಧ್ಯಾಹ್ನ 3.30 ಅವಧಿಯಲ್ಲಿ ತರಗತಿ ನಡೆಸಬೇಕಿದೆ. ಈ ಮಾರ್ಗಸೂಚಿ ಹೊರತಾಗಿ ಕೋವಿಡ್ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

    ಪ್ರಮುಖ ಸೂಚನೆಗಳು

    • ಶಾಲೆಗಳನ್ನು ಸ್ಯಾನಿಟೈಸ್ ಮಾಡಬೇಕು
    • ಕರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು
    • ರೋಗ ಲಕ್ಷಣ ಇದ್ದರೆ, ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಿ, ಚಿಕಿತ್ಸೆಗೆ ಸೂಚಿಸಬೇಕು
    • ಶಿಕ್ಷಕರು ಫೇಸ್​ಶೀಲ್ಡ್​​ ಧರಿಸಬೇಕು
    • ಶಾಲೆಗಳಲ್ಲಿ ಮೂರನೇ ವ್ಯಕ್ತಿಗೆ ಪ್ರವೇಶ ನಿರ್ಬಂಧಿಸಬೇಕು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts