ಸಿನಿಮಾ

ಭೀಕರ ಅಪಘಾತ; ಬಿಜೆಪಿಯ ಮಾಜಿ ಸಚಿವ ವಿಧಿವಶ

ಸಾವರ್ಕುಂಡ್ಲಾ: ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗುಜರಾತ್‌ನ ಮಾ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ಈ ಘಟನೆ ನಡೆದಿದ್ದು, ಗುರುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.

ಘಟನೆ ಹಿನ್ನೆಲೆ:

ಮಾಜಿ ಸಚಿವರು ಗುರುವಾರ ರಾತ್ರಿ ಸಾವರ್ಕುಂಡ್ಲಾಗೆ ಹಿಂತಿರುಗುತ್ತಿದ್ದರು. ಈ ವೇಳೆ ವಂಡಾ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ವಘಾಸಿಯಾ ಚಲಾಯಿಸುತ್ತಿದ್ದ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹಿತ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಜತೆಗೆ ಮಾಜಿ ಸಚಿವರ ವಾಹನದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ ಎಂದು ಪೊಲೀಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಕಿವಿಮಾತು

ವಘಾಸಿಯಾ, ಸಾವರ್ಕುಂಡ್ಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಶಾಸಕರಾಗಿದ್ದರು. ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.(ಏಜೆನ್ಸೀಸ್​​)

Latest Posts

ಲೈಫ್‌ಸ್ಟೈಲ್