More

  ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರು; ನಾಲ್ವರು ಸಾವು, ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

  ಅಹಮದಾಬಾದ್: ಸಾಮಾಜಿಕ ಮಾಧ್ಯಮದ ಯುಗದಲ್ಲಿ ವೈರಲ್​ ಆಗುವ ಭರದಲ್ಲಿ ಇಲ್ಲಸಲ್ಲದ ಕೆಲಸ ಮಾಡಿ ಪೇಚಿಗೆ ಸಿಲುಕುತ್ತಾರೆ. ಇದೀಗ ಇದಕ್ಕೆ ಪೂರಕವೆಂಬಂತೆ ಘಟನೆಯೊಂದು ನಡೆದಿದ್ದು, ನಾಲ್ವರು ಯುವಕರು ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತಿನ ವಸದ್​ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.

  ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಇನ್ಸ್​ಟಾಗ್ರಾಂನಲ್ಲಿ ಲೈವ್​ ಬಂದಿರುವ ಐವರು ಯುವಕರು ಜೋರಾದ ಹಾಡನ್ನು ಹಾಕಿಕೊಂಡು ಕಾರನ್ನು 140 ಕಿಲೋಮೀಟರ್​ ವೇಗದಲ್ಲಿ ಚಲಾಯಿಸುವುದನ್ನು ನೋಡಬಹುದಾಗಿದೆ. ಇದಾದ ಕೆಲ ಕ್ಷಣಗಳ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗುವುದನ್ನು ನೋಡಬಹುದಾಗಿದೆ.

  ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ನಡೆದಾಗ ಐವರು ಯುವಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈವ್​ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಜಾಗರೂಕ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಹೇಳಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts