IPL 2025 | ಇಂಡಿಯನ್ ಪ್ರೀಮಿಯರ್ ಲೀಗ್ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಕೆ.ಎಲ್. ರಾಹುಲ್ ಅವರ ಭರ್ಜರಿ ಶತಕದ ನೆರವನಿಂದ 20 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 199 ರನ್ ಗಳಿಸಿತು.
ಗೆಲುವಿಗೆ 200 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟನ್ಸ್ ತಂಡ, ಸಾಯಿ ಸುದರ್ಶನ್(108) ಅವರ ಶತಕ ಹಾಗೂ ಶುಭಮನ್ ಗಿಲ್(93) ಅವರ ಅರ್ಧಶತಕದ ನೆರವಿನಿಂದ ಯಾವುದೇ ವಿಕೆಟ್ ನಷ್ಟವಿಲ್ಲದೆ 19 ಓವರ್ ಗಳಲ್ಲಿ 205 ರನ್ ಗಳಿಸುವ ಮೂಲಕ 10 ವಿಕೆಟ್ ಗಳಿಂದ ಗೆಲುವು ಮುಡಿಗೇರಿಸಿಕೊಂಡಿತು.
ಯುಪಿಐ ಮೂಲಕ ಆನ್ಲೈನ್ ವಹಿವಾಟು ನಡೆಸುವವರಿಗೆ NPCI ನಿಂದ ಹೊಸ ನಿಯಮ ಜಾರಿ| New-rules