

ಗಂಗೊಳ್ಳಿ: ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಪಂ 2024-25ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ಗ್ರಾಪಂ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಗುಜ್ಜಾಡಿ ಗ್ರಾಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನಾಗರತ್ನ ಖಾರ್ವಿ, ಗ್ರಾಪಂ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು, ಗಂಗೊಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಿಶು ಕಲ್ಯಾಣ ಇಲಾಖೆ ಅಧಿಕಾರಿಗಳು, ಪಿಡಿಒ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಗುಜ್ಜಾಡಿ ಗ್ರಾಪಂ ವ್ಯಾಪ್ತಿಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಸಿಡಬ್ಲುೃಸಿ ಸಂಸ್ಥೆ ಶ್ರೀನಿವಾಸ ಗಾಣಿಗ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಶಾಲೆ ಸ್ವಚ್ಛತೆ, ಬೀದಿನಾಯಿ ಹಾವಳಿ, ಗ್ರಂಥಾಲಯದ ಬೇಡಿಕೆ, ತೆರೆದ ಬಾವಿಗೆ ಆವರಣ ನಿರ್ಮಾಣ ಹಾಗೂ ಶಾಲಾ ವಿದ್ಯಾರ್ಥಿಯ ಮನೆಗೆ ಅಗತ್ಯವಿರುವ ವಿದ್ಯುತ್ ಮತ್ತು ನಳ್ಳಿ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ ವಿದ್ಯಾರ್ಥಿಗಳು ಮಕ್ಕಳ ಗ್ರಾಮಸಭೆಯಲ್ಲಿ ಪ್ರಸ್ತಾಪಿಸಿ ಸ್ಥಳೀಯಾಡಳಿತದ ಗಮನ ಸೆಳೆದರು. ಪಿಡಿಒ ಅನಿತಾ ಸ್ವಾಗತಿಸಿದರು. ಕಾರ್ಯದರ್ಶಿ ಶಕುಂತಳಾ ಕಾರ್ಯಕ್ರಮ ನಿರ್ವಹಿಸಿದರು.