22.5 C
Bengaluru
Sunday, January 19, 2020

ಗುರು ಇರದಿದ್ದರೆ ಸಂಸ್ಕಾರವಿಲ್ಲ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಗುಳೇದಗುಡ್ಡ: ಲಿಂ.ಅಮರೇಶ್ವರ ಸ್ವಾಮಿಗಳು ಶಾಸ, ಜ್ಯೋತಿಷ್ಯ ಹಾಗೂ ಆಯುರ್ವೇದ ವೈದ್ಯಕೀಯ ಪಂಡಿತರಾಗಿ ತಮ್ಮ ಜೀವನದುದ್ದಕ್ಕೂ ಜನರಿಗೆ ಅಧ್ಯಾತ್ಮ ಬೋಧನೆ ಜತೆಗೆ ಆರೋಗ್ಯ ಸೇವೆಯನ್ನೂ ಮಾಡಿದ್ದರು. ಶ್ರೀಗಳು ಸಾಧಕರಾಗಿ ಭಕ್ತರ ಒಳಿತಿಗಾಗಿ ಜೀವನ ನಡೆಸಿದ್ದರು ಎಂದು ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಅಮರೇಶ್ವರ ಮಠದಲ್ಲಿ ಲಿಂ.ಅಮರೇಶ್ವರ ಸ್ವಾಮಿಗಳ 50ನೇ ಪುಣ್ಯಾರಾಧನೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಜನಜಾಗೃತಿ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಗುರು ಇರದೆ ಹೋದರೆ ನಮಗೆ ಸಂಸ್ಕಾರವಿಲ್ಲ. ಮಗುವಿಗೆ ಜನ್ಮ ನೀಡಿದ ತಾಯಿ ಎಷ್ಟು ಮುಖ್ಯವೋ ಆ ಮಗುವಿಗೆ ಕಾಲಕಾಲಕ್ಕೆ ಸಂಸ್ಕಾರ ನೀಡಿ, ಒಳ್ಳೆಯ ಮನುಷ್ಯನನ್ನಾಗಿ ರೂಪಿಸುವ ಗುರುವೂ ಅಷ್ಟೇ ಮುಖ್ಯ ಎಂದರು.

ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಅಮೇಶ್ವರ ಶ್ರೀಗಳು ಸಮಾಜಮುಖಿಯಾಗಿ ಧಾರ್ಮಿಕ ಪರಂಪರೆಯನ್ನು ಹುಟ್ಟುಹಾಕಿ ಈ ಸ್ಥಳವನ್ನು ಪುಣ್ಯ ಕ್ಷೇತ್ರವನ್ನಾಗಿಸಿದ್ದಾರೆ. ಇದನ್ನು ಐವತ್ತು ವರ್ಷಗಳಾದರೂ ಇಲ್ಲಿನ ಜನ, ಈ ನಾಡು ನೆನಪಿಸಿಕೊಳ್ಳುತ್ತಿದೆ. ಅವರ ಪರಂಪರೆ ಈ ಮಠದಲ್ಲಿ ಮುಂದುವರಿಯಲಿ ಎಂದರು.

ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಮಾತನಾಡಿ, ನಾವು ನಿತ್ಯ ಲಿಂಗಪೂಜೆ ಮಾಡಬೇಕು. ದಾನ ಧರ್ಮ, ಅತಿಥಿ ಸತ್ಕಾರ ಮಾಡಬೇಕು. ಇಂತಹ ಸಂಸ್ಕಾರ ಹೊಂದಿರುವವರ ಮನೆ ಸಂತೋಷದಿಂದ ಕೂಡಿರುತ್ತದೆ. ಯಾರ ಮನೆಯಲ್ಲಿ ಸಂತೋಷ ಇರುತ್ತದೆಯೋ ಅವರ ಮನೆಯಲ್ಲಿ ದೇವರು ನೆಲೆಸಿರುತ್ತಾನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆರೂರಿನ ಡಾ. ಶಿವಕುಮಾರ ಶಿವಾಚಾರ್ಯರು, ಕೋಟೆಕಲ್ಲಿನ ಹೊಳೆಹುಚ್ಚೇಶ್ವರ ಶ್ರೀಗಳು, ಶ್ರೀಮಠದ ನೀಲಕಂಠ ಶಿವಾಚಾರ್ಯರು, ರುದ್ರಮುನಿ ಸ್ವಾಮೀಜಿ, ಸಿದ್ಧಲಿಂಗ ಶ್ರೀಗಳು, ಮುರುಘಾಮಠದ ಕಾಶಿನಾಥ ಶ್ರೀಗಳು, ಶ್ರೀ ಮಲಯ ಶಾಂತಮುನಿ ಶ್ರೀಗಳು, ವಿವೇಕಾನಂದ ದೇವರು, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಹನುಮಂತ ಮಾವಿನಮರದ, ಬಿ.ಪಿ. ಹಳ್ಳೂರ, ಎಂ.ಬಿ. ಹಂಗರಗಿ, ಬಸವರಾಜ ಶಾಸಿ, ರಾಜು ಚಿಮ್ಮನಕಟ್ಟಿ ಮಾತನಾಡಿದರು.

ಘನಶ್ಯಾಮದಾಸ ರಾಠಿ, ಸಿದ್ದಪ್ಪ ತಾಂಡೂರ, ಎಸ್.ಎ್. ಹರ್ಲಾಪುರ, ಪ್ರಭು ಮೊರಬದ, ಪ್ರಭುಸ್ವಾಮಿ ಸರಗಣಾಚಾರಿ, ಮಾಗುಂಡಪ್ಪ ಸುಂಕದ, ಈಶ್ವರ ಗಾಣಿಗೇರ, ಶಿವನಯ್ಯ ಮಳಿಮಠ, ಎಂ.ಎಸ್. ಹಿರೇಮಠ, ರವಿ ಕಂಗಳ, ವೀರಭದ್ರಪ್ಪ ಬಳಿಗಾರ, ಈಶ್ವರಪ್ಪ ರಾಜನಾಳ, ಪಡದಯ್ಯ ಕಕ್ಕಯ್ಯನಮಠ, ರವಿ ಗೌಡರ, ಮುತ್ತು ಮೊರಬದ, ಶಿವು ವಾಲಿಕಾರ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.

ಅಮರಶ್ರೀ ಪ್ರಶಸ್ತಿ ಪ್ರದಾನ
ಜಮಖಂಡಿಯ ಉದ್ಯಮಿ ಜಗದೀಶ ಗುಡಗುಂಟಿ ಅವರಿಗೆ ಅಮರಶ್ರೀ ಪ್ರಶಸ್ತಿ ಪ್ರದಾನ ಹಾಗೂ 60 ದಂಪತಿಗೆ ಅಮರ ಆದರ್ಶ ದಂಪತಿ ಎಂದು ಗೌರವಿಸಲಾಯಿತು. 50 ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಸಿದ್ಧಾಂತ ಶಿಖಾಮಣಿ ಆ್ಯಪ್
ವಾರಾಣಸಿಯ ಜಂಗಮವಾಡಿಯಲ್ಲಿ 2020ರ ಜನವರಿ 1 ರಿಂದ ೆಬ್ರವರಿ 21ರವರಗೆ ಕಾಶಿ ಜಂಗಮವಾಡಿ ಗುರುಕುಲದ ಶತಮಾನೋತ್ಸವ ಸಮಾರಂಭ ಹಮ್ಮಿಕೊಂಡಿದ್ದು, ಈ ವೇಳೆ 18 ಭಾಷೆಗಳಲ್ಲಿ ರಚಿತಗೊಂಡಿರುವ ಸಿದ್ಧಾಂತ ಶಿಖಾಮಣಿ ಗ್ರಂಥದ ಆ್ಯಪ್‌ನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಲಿಂ. ಅಮರೇಶ್ವರ ಶ್ರೀಗಳ ಸುವರ್ಣ ಮಹೋತ್ಸವ ಕೂಡ ನಡೆಯಲಿದೆ.ಯುವಪೀಳಿಗೆ ಓದಲು ಅನುಕೂಲವಾಗುವಂತೆ ಡಿಜಿಟಲ್ ಮಾದರಿಯಲ್ಲಿ ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ಮೊಬೈಲ್ ಅಪ್ಲಿಕೇಷನ್ ರೂಪದಲ್ಲಿ ಹೊರತಂದಿದ್ದು, ಇದನ್ನು ಗೂಗಲ್ ಆ್ಯಪ್ ಸ್ಟೋರ್‌ನಿಂದ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಡಾ.ಚಂದ್ರಶೇಖರ ಶಿವಾಚಾರ್ಯರು ಹೇಳಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...