More

    ಗುಳೆ ಹೋಗದೆ ಖಾತ್ರಿ ಕೆಲಸ ಮಾಡಿ

    ಸಿರಗುಪ್ಪ: ನರೇಗಾ ಯೋಜನೆಯು ಕೂಲಿ ಕಾರ್ಮಿಕರಿಗೆ ವರದಾನವಾಗಿದ್ದು, ಒಂದು ವರ್ಷದಲ್ಲಿ 100 ದಿನ ಕೆಲಸ ಕೊಡಲಾಗುವುದು, ಆದ್ದರಿಂದ ಕೂಲಿ ಕಾರ್ಮಿಕರು ಗುಳೆ ಹೋಗದೆ ನಿಮ್ಮ ಊರಿನಲ್ಲಿಯೇ ಖಾತ್ರಿ ಯೋಜನೆಯಡಿ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ರಾಹುಲ್ ಎಸ್.ಸಂಕನೂರ ಹೇಳಿದರು.

    ಮುದೇನೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು. ನರೇಗಾ ಯೋಜನೆಯಡಿ ವೈಯಕ್ತಿಕ ಮತ್ತು ಸಾಮೂಹಿಕ ಕಾಮಗಾರಿಗಳನ್ನು ಮಾಡಿಕೊಳ್ಳಬಹುದು.

    ಇದನ್ನು ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಅರ್ಜಿ ಸಲ್ಲಿಸಿ

    ಆರ್ಥಿಕ ವರ್ಷದಲ್ಲಿ ಕೂಲಿ ಮೊತ್ತ 349 ರೂ. ಕೊಡಲಾಗುತ್ತಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುವುದು. ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಾರ್ಮಿಕರು ಬೇಗ ಕೆಲಸಕ್ಕೆ ಬಂದು ಬೇಗ ಮನೆಗೆ ತೆರಳಬೇಕು. ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಶೇ.50 ರಿಯಾಯಿತಿ ಇದ್ದು, ಅವರಿಗೆ ಪೂರ್ಣ ಪ್ರಮಾಣದ ಕೂಲಿ ನೀಡಲಾಗುವುದು.

    ತಾಯಂದಿರು ಚಿಕ್ಕ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಡಲು ಅವಕಾಶವಿದ್ದು, ಅಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಅಲ್ಲದೆ ಪಾಲನೆಗೆ ಆರೈಕೆದಾರರು ಇದ್ದಾರೆ ಎಂದರು. ನಂತರ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಾಪಂ ಇಒ ಪವನ್‌ಕುಮಾರ್, ನರೇಗಾ ಸಹಾಯಕ ನಿರ್ದೇಶಕ ಮನೋಹರ ಇತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts