ಎಲ್ಲ ಕಾಮಗಾರಿ ಪೂರ್ಣಗೊಳಿಸುವೆ

blank
blank

ಗುಳೇದಗುಡ್ಡ: ಕೆಲವಡಿ ಗ್ರಾಮದಲ್ಲಿ ಅಂದಾಜು 4.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆಯನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಹೇಳಿದರು.

ಸಮೀಪದ ಕೆಲವಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿದ 1.5 ಸಾವಿರ ಮೀಟರ್ ಕಾಂಕ್ರೀಟ್ ರಸ್ತೆಯನ್ನುಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಅವಧಿ ಇನ್ನೂ ಎರಡು ವರ್ಷವಿದ್ದು ಗ್ರಾಮದಲ್ಲಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇನೆ. ಗ್ರಾಮದಲ್ಲಿನ ರಂಗನಾಥ ಜಾತ್ರೆಯ ತೇರು ಎಳೆಯಲು ಸುಂದರ ಹಾಗೂ ಅಗಲವಾದ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ತೇರು ಎಳೆಯಲು ರಸ್ತೆ ಅನುಕೂಲವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಸಚಿವರಾದ ಎಚ್.ವೈ. ಮೇಟಿ, ಆರ್.ಬಿ. ತಿಮ್ಮಾಪುರ, ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕ ಜೆ.ಟಿ. ಪಾಟೀಲ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಜಿಪಂ ಸದಸ್ಯೆ ಸರಸ್ವತಿ ಮೇಟಿ, ಮುಖಂಡರಾದ ಹೊಳಬಸು ಶೆಟ್ಟರ, ಭೀಮಸೇನ ಚಿಮ್ಮನಕಟ್ಟಿ, ಮಹೇಶ ಹೊಸಗೌಡರ, ಎಂ.ಬಿ. ಹಂಗರಗಿ, ರಾಜು ಜವಳಿ, ಲೋಕೋಪಯೋಗಿ ಇಲಾಖೆ ಎಇಇ ಶಿವಾನಂದ ಜಾಡರ ಇದ್ದರು.

Share This Article

ಮೀನಿನ ಕಣ್ಣು ಆರೋಗ್ಯಕ್ಕೆ ಉತ್ತಮ! ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Fish Eye

Fish Eye: ಮೀನಿನ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಅದಕ್ಕಿಂತ ಹೆಚ್ಚಿನ ಆರೋಗ್ಯಕಾರಿ ಅಂಶಗಳು ಮೀನಿನ…

ಪಾರ್ಲಿಮೆಂಟ್​ ಮೆನುವಿನಲ್ಲಿ ರಾಗಿ ಇಡ್ಲಿ ದರ್ಬಾರ್​! ಮಾಡೊದೇಗೆ? ಇಲ್ಲಿದೆ ಸಿಂಪಲ್ಸ್​ ಟಿಪ್ಸ್​​.. | Ragi Idli

Ragi Idli : ಇತ್ತೀಚಿನ ವೇಗದ ಆಧುನಿಕ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳೋದೆ ಕಷ್ಟವಾಗಿದೆ. ಆದರಲ್ಲೂ ಪಟ್ಟಣ…