More

  ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಮೂರು ದಿನದ ಗಡುವು

  ಗಂಗಾವತಿ: ನಗರದ ಪ್ರಮುಖ ರಸ್ತೆಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕಾಗಿ ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳನ್ನು ಗುಂಡಮ್ಮ ಕ್ಯಾಂಪ್ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದೆ. ಸ್ವಯಂಪ್ರೇರಣೆಯಿಂದ ಸ್ಥಳಾಂತರಗೊಳ್ಳಲು ಮೂರು ದಿನದ ಗಡವು ನೀಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ತಿಳಿಸಿದ್ದಾರೆ.

  ನಗರದ ಮುಖ್ಯ ರಸ್ತೆಗಳ ಪಕ್ಕದಲ್ಲಿ, ಪ್ರಮುಖ ವತ್ತಗಳಲ್ಲಿ ಹಾಗೂ ಇತರ ಸ್ಥಳಗಳಲ್ಲಿ ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ನಡೆಯುತ್ತಿದೆ. ಇದರಿಂದ ಪಾದಚಾರಿಗಳು ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಜನದಟ್ಟಣೆಯಿಂದ ಅಪಘಾತಗಳು ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದೆ. ತಳ್ಳುವ ಗಾಡಿಗಳನ್ನು ಸಿಟಿ ಮಾರ್ಕೆಟ್ ಆವರಣದಲ್ಲಿ ನಿಲ್ಲಿಸಲು ಅವಕಾಶ ನೀಡಲಾಗಿದೆ. ರಸ್ತೆ ಪಕ್ಕದಲ್ಲಿ, ಪ್ರಮುಖ ವತ್ತಗಳಲ್ಲಿ ವ್ಯಾಪಾರ ಮಾಡುವುದು ಕಂಡುಬಂದಲ್ಲಿ ತಳ್ಳುವ ಗಾಡಿ ಹಾಗೂ ಸಾಮಾಗ್ರಿಗಳನ್ನು ಜಪ್ತಿ ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಪಾದಚಾರಿ ಮಾರ್ಗ ಅತಿಕ್ರಮಿಸಿ ಶೆಡ್‌ಗಳನ್ನು ನಿರ್ಮಿಸಿಕೊಂಡು ಕೆಲವರು ವಹಿವಾಟು ನಡೆಸುತ್ತಿದ್ದಾರೆ. ಸ್ವಯಂಪ್ರೇರಣೆಯಿಂದ ತೆರವುಗೊಳಿಸದಿದ್ದರೆ, ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts