17.8 C
Bengaluru
Wednesday, January 22, 2020

ಅರಣ್ಯ ರಕ್ಷಣೆಗೆ ಡ್ರೋನ್ ಕಣ್ಗಾವಲು

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಗುಂಡ್ಲುಪೇಟೆ: ಮುಂದಿನ ಬೇಸಿಗೆಯಲ್ಲಿ ಬಂಡೀಪುರವನ್ನು ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ.

ಬೇಸಿಗೆಯಲ್ಲಿ ಬೆಂಕಿ ಹರಡುವುದನ್ನು ಕೂಡಲೇ ಗುರುತಿಸಲು ಇದೇ ಮೊದಲ ಬಾರಿಗೆ ಡ್ರೋನ್ ಕ್ಯಾಮರಾ ಮೂಲಕ ಕಾವಲಿಗೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಕಿಡಿಗೇಡಿಗಳ ದುಷ್ಕೃತ್ಯದಿಂದ ಕಂದಕೆರೆ, ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ, ಮದ್ದೂರು ವಲಯಗಳಿಗೆ ಹರಡಿದ ಬೆಂಕಿಯಿಂದ ಸಾವಿರಾರು ಹೆಕ್ಟೇರ್ ಅರಣ್ಯ ಭಸ್ಮವಾಗಿತ್ತು.

ಈ ಹಿನ್ನೆಲೆಯಲ್ಲಿ ಹುಲಿ ಯೋಜನೆಯ ಗೋಪಾಲಸ್ವಾಮಿ ಬೆಟ್ಟ ವಲಯ, ಕುಂದಕೆರೆ ವಲಯ, ಮದ್ದೂರು ಹಾಗೂ ಓಂಕಾರ್ ವಲಯದ ಕಾಡಂಚಿನಲ್ಲಿ ನಾಲ್ಕು ಡ್ರೋನ್ ಕ್ಯಾಮರಾಗಳ ಕಣ್ಗಾವಲಿನಲ್ಲಿ ನಿಗಾ ಇಡಲು ನಿರ್ಧರಿಸಿದ್ದು, ಇದರ ನಿರ್ವಹಣೆಗೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಅರಣ್ಯ ಸಿಬ್ಬಂದಿ ಜತೆಗೆ ಸ್ಥಳೀಯ ಗ್ರಾಮಸ್ಥರು, ಸ್ವಯಂ ಸೇವಕರು ಬೆಂಕಿ ನಂದಿಸಲು ಹರಸಾಹಸ ಮಾಡಿದ್ದರೂ ನಿಯಂತ್ರಣಕ್ಕೆ ಬಾರದೇ ವಾಯು ಪಡೆಯ ಹೆಲಿಕಾಫ್ಟರ್ ಬಳಕೆ ಮಾಡಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಈ ಬಾರಿ ಪ್ರತಿ ವಲಯಕ್ಕೂ 40 ರಿಂದ 50 ಫೈರ್ ವಾಚರ್‌ಗಳನ್ನು ನೇಮಕ ಮಾಡಿಕೊಂಡಿದ್ದು 13 ವಲಯಗಳಲ್ಲಿ ಒಟ್ಟು 800 ಜನರಿಗೆ ಉದ್ಯೋಗ ನೀಡಲಾಗಿದೆ. ಎರಡು ಶಿಫ್ಟ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಗಲಿರುಳು ಕಾವಲು ಕಾಯುತ್ತಿದ್ದಾರೆ.

ಬೇಸಿಗೆಯಲ್ಲಿ ನೇಮಕ ಮಾಡಿಕೊಳ್ಳುವ ಫೈರ್ ವಾಚರ್‌ಗಳಿಗೂ ಇನ್ಶೂರೆನ್ಸ್ ಮಾಡಲಾಗುತ್ತಿದ್ದು ದುರಂತಗಳಿಂದ ಸುರಕ್ಷತೆ ನೀಡಲಾಗುತ್ತಿದೆ. ಅಕ್ರಮ ನುಸುಳುಕೋರರ ಪತ್ತೆ ಹಾಗೂ ಬೆಂಕಿ ಬಿದ್ದಿರುವುದನ್ನು ಕೂಡಲೇ ಪತ್ತೆ ಹಚ್ಚಲು ಡ್ರೋನ್ ಕ್ಯಾಮರಾ ಕಣ್ಗಾವಲು ಇರಿಸಲಾಗುವುದು. ಅಲ್ಲದೆ ಆಯಕಟ್ಟಿನ ಸ್ಥಳಗಳಲ್ಲಿ ನೀರಿನ ಸಂಗ್ರಹ ಮಾಡಿ ಸಿಬ್ಬಂದಿಗೆ ಅಗ್ನಿಶಾಮಕ ದಳದಿಂದ ತರಬೇತಿ ಕೊಡಿಸಿ ಅಗ್ನಿಶಾಮಕ ಯಂತ್ರಗಳನ್ನು ಸನ್ನದ್ಧವಾಗಿರಿಸಲಾಗಿದೆ.
ಎಂ.ಎಸ್.ರವಿಕುಮಾರ್ ಬಂಡೀಪುರ ಉಪವಿಭಾಗದ ಎಸಿಎಫ್

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...