More

    ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ವಿರುದ್ಧ ತನಿಖೆ

    ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ವಿರುದ್ಧ ರೈತ ಸಂಘಟನೆ ಮಾಡಿರುವ ಆರೋಪಗಳ ಬಗ್ಗೆ ತನಿಖೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರು ಪತ್ರ ಬರೆದಿದ್ದಾರೆ.

    ಡಾ.ರಮೇಶ್ ಕುಮಾರ್ ಅವರು ಬಂಡೀಪುರ ಹುಲಿ ಸಂರಕ್ಷಣಾ ನಿಧಿಯಿಂದ ಕ್ರಿಯಾಯೋಜನೆ ತಯಾರಿಸಿ ಗಜೇಂದ್ರ ಅತಿಥಿಗೃಹ ನವೀಕರಣ ಸೇರಿದಂತೆ 14 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಸಿದ್ದಾರೆ. ಆದರೆ ಇಷ್ಟು ದೊಡ್ಡ ಮೊತ್ತದ ಕಾಮಗಾರಿ ನಡೆಸಲು ಟೆಂಡರ್ ಕರೆಯದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ರೈತ ಸಂಘಟನೆ ಪದಾಧಿಕಾರಿಗಳು ಇತ್ತೀಚೆಗೆ ಬಂಡೀಪುರದಲ್ಲಿ ಪ್ರತಿಭಟನೆ ನಡೆಸಿ ಶಾಸಕ ಹಾಗೂ ಅರಣ್ಯ ಸಚಿವರ ಗಮನಕ್ಕೆ ತಂದಿದ್ದರು.

    ಅಲ್ಲದೆ, ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶಪ್ರಸಾದ್ ಸಹ ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts