

ಗುಂಡ್ಲುಪೇಟೆ: ತಾಲೂಕಿನ ಬಸವಾಪುರ ಗೇಟ್ ಸಮೀಪ ಗುರುವಾರ ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
ನಿವೃತ್ತ ಮುಖ್ಯಶಿಕ್ಷಕ ಕಿಟ್ಟರಾಚನಾಯ್ಕ(64) ಮೃತರು. ಪಟ್ಟಣದಿಂದ ಹಂಗಳಕ್ಕೆ ಹೋಗುತ್ತಿದ್ದ ಕಿಟ್ಟರಾಚನಾಯ್ಕ ಅವರ ಬೈಕಿಗೆ ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹೊಯ್ಸಳ ಪೊಲೀಸರು ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದರು. ತೀವ್ರ ಪೆಟ್ಟಾಗಿದ್ದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವಾಗ ಮಾರ್ಗದಲ್ಲಿ ಮೃತಪಟ್ಟರು. ಈ ಬಗ್ಗೆ ಪಟ್ಟಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.