More

    ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾರಣ

    ಗುಂಡ್ಲುಪೇಟೆ: ಇಂದು ದೇಶ ಅಭಿವೃದ್ಧಿ ಹೊಂದಲು ಕಾಂಗ್ರೆಸ್ ಮೂಲ ಕಾರಣವಾಗಿದ್ದು, ಬಿಜೆಪಿ ಸುಳ್ಳು ಹೇಳುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

    ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿ ಜನಪರವಾದ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಇದು ಮತದಾರರ ಮೆಚ್ಚುಗೆಗೆ ಪಾತ್ರವಾಗಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದೆ. ಜಿಲ್ಲೆ ಹಾಗೂ ತಾಲೂಕಿನ ಗ್ರಾಮ ಪಂಚಾಯಿತಿಗಳು, ಸಹಕಾರ ಸಂಘಗಳು ಡೇರಿಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಸುನಿಲ್‌ಬೋಸ್ ಹೆಸರು ಅಂತಿಮವಾಗಿದ್ದು ಪ್ರಕಟಣೆಯಷ್ಟೇ ಬಾಕಿಯಿದೆ. ಆದ್ದರಿಂದ ಕಾರ್ಯಕರ್ತರು ಕಾಂಗ್ರೆಸ್‌ನ ಜನಪರ ಯೋಜನೆಗಳನ್ನು ಮನೆಮನೆಗಳಿಗೆ ತಲುಪಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಮಾತನಾಡಿ, ಜಿಲ್ಲೆಯು ಕಾಂಗ್ರೆಸ್ ಭದ್ರಕೋಟೆಯಾಗಿದೆ. ಆದ್ದರಿಂದ ಕಾರ್ಯಕರ್ತರು ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಅದನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾಗಿದೆ ಎಂದು ಹೇಳಿದರು.

    ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಮಾಜಿ ಸಂಸದ ಎ.ಸಿದ್ದರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಎಸ್.ಮಹೇಶ್, ಕೆರೆಹಳ್ಳಿ ನವೀನ್, ಪಿ.ಚನ್ನಪ್ಪ, ಬಿ.ಕೆ.ಬೊಮ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುನಿರಾಜು, ರಾಜಶೇಖರ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts