More

  ವಿವಿಧ ಸಂಘಟನೆಗಳಿಂದ ಮುಷ್ಕರ

   ಗುಂಡ್ಲುಪೇಟೆ: ತಾಲೂಕಿನಲ್ಲಿ ವಿವಿಧ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು.
  ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಜಮಾವಣೆಗೊಂಡ ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಅಕ್ಷರ ದಾಸೋಹದ ಬಿಸಿಯೂಟ ನೌಕರರು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
  ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ. ಕಾರ್ಮಿಕರಿಂದಲೇ ಸರ್ಕಾರಗಳು ರಚನೆಯಾಗಿವೆ. ಇದೀಗ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ದೇಶಾದ್ಯಂತ ಪ್ರತಿಭಟನೆಗಳು ಹೀಗೆ ಮುಂದುವರಿಯುತ್ತವೆ ಎಂದು ಎಚ್ಚರಿಸಿದರು.
  ತಹಸೀಲ್ದಾರ್ ನಂಜುಂಡಯ್ಯ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೊತ್ತಲವಾಡಿ ಮಹದೇವಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಮಲ್ಲು ಚಿಕ್ಕತುಪ್ಪೂರು, ಪ್ರಧಾನ ಕಾರ್ಯದರ್ಶಿ ಮಹೇಂದ್ರ, ಕಂದೇಗಾಲ ವೆಂಕಟರಾಜು, ಶಿವಶಂಕರಪ್ಪ, ಶಿವಮ್ಮ, ವಿಮಲಾ, ಮಹದೇವಮ್ಮ ಇತರರು ಭಾಗವಹಿಸಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts