ಭದ್ರತಾ ಪಡೆಗಳು, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ: 10 ಉಗ್ರರು ಬಲಿ | Imphal

Imphal

Imphal: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಬುಧವಾರ (ಮೇ.14) ಅಸ್ಸಾಂ ರೈಫಲ್ಸ್ ಘಟಕದ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿದ್ದಾರೆ. ಘಟನೆಯಾದ ಈ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

blank

ಇದನ್ನೂ ಓದಿ: ನೀವು ಮಾಡುವ ಈ ಒಂದು ತಪ್ಪಿನಿಂದ ಶಾರ್ಟ್​ ಸರ್ಕ್ಯೂಟ್​ ಆಗಬಹುದು ಎಚ್ಚರ! ತಪ್ಪಿಸಲು ಏನು ಮಾಡಬೇಕು? Short Circuit

ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಉಗ್ರರರ ಚಲನವಲನಗಳ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಮೇ 14ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಸೇನೆಯ ಪೂರ್ವ ಕಮಾಂಡ್​​​ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದೆ.

ಈ ಕಾರ್ಯಾಚರಣೆಯ ಸಮಯದಲ್ಲಿ ಶಂಕಿತ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು ಅದಕ್ಕೆ ಪ್ರತಿಯಾಗಿ ಸೇನೆಯೂ ಗುಂಡು ಹಾರಿಸಿದೆ, ನಂತರ ಈ ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. (ಏಜೆನ್ಸೀಸ್​)

ಅಧಿಕ ಆಂತರಿಕ ರಕ್ತಸ್ರಾವದಿಂದ ಬಳಲುತ್ತಿದ್ದ ನಟಿ ಮೊನಾಲಿಸಾ ಸ್ಟೀಫನ್ ನಿಧನ! Monalisa Stephen Passes Away

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank