ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ಕೂಟಿಗೆ ಕಾರು ಡಿಕ್ಕಿ ಹೊಡೆದ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಯುವಕನೊಬ್ಬ ರಿವಾಲ್ವರ್‌ನಿಂದ ಗುಂಡು ಹಾರಿಸಿದ ಘಟನೆ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣ ಬಳಿ ಬುಧವಾರ ರಾತ್ರಿ 12.30ರ ಗಂಟೆ ಸುಮಾರಿಗೆ ನಡೆದಿದೆ.
ನಗರದ ಸಂಗಮ ವೃತ್ತದಲ್ಲಿ ಫೈನಾನ್ಸ್ ನಡೆಸುತ್ತಿರುವ ಅಭಿಷೇಕ ಬಡ್ಡಿಮನಿ ಎಂಬ ಯುವಕ ಮನೆಗೆ ಹೋಗುತ್ತಿದ್ದ ವೇಳೆ ಹಿಂದೆ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರ್‌ನಲ್ಲಿದ್ದ ಮೂವರೊಂದಿಗೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ಅಭಿಷೇಕ ತನ್ನ ಬಳಿ ಇದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಭಯದಲ್ಲಿ ತನ್ನ ದ್ವಿಚಕ್ರ ವಾಹನ ಅಲ್ಲೇ ಬಿಟ್ಟು ಓಡಿ ಹೋಗಿದ್ದ.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಅಭಿಷೇಕ ಬಡ್ಡಿಮನಿ ಎಂಬಾತನಿ0ದ ದೂರು ದಾಖಲಾಗಿದೆ. ಮನೆಗೆ ಹೊರಟಿದ್ದ ವೇಳೆ ಹಿಂದಿನಿ0ದ ಕಾರ್‌ನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ರಿವಾಲ್ವರ್ ಕಸಿಯಲು ಯತ್ನಿಸಿ ಹಲ್ಲೆ ಮಾಡಿದ್ದಾರೆ. ಅಲ್ಲದೆ, ಕಾರ್‌ನಲ್ಲಿ ಎತ್ತಾಕಿಕೊಂಡು ಹೋಗಲು ಯತ್ನಿಸಿದ್ದಾರೆ ಎಂದು ಅಭಿಷೇಕ ದೂರಿದ್ದಾನೆ.
ಪ್ರಕರಣಕ್ಕೆ ಸಂಬ0ಧಿಸಿ ಪ್ರಜ್ವಲ್, ಗಣೇಶ, ದಿನೇಶ ಎಂಬುವರಿ0ದ ಪ್ರತಿ ದೂರು ದಾಖಲಾಗಿದೆ. ಬೈಕ್‌ನಲ್ಲಿ ವೇಗದಿಂದ ಬಂದ ಅಭಿಷೇಕ ಕಾರ್‌ಗೆ ಗುದ್ದಿದ್ದಾನೆ. ಇದನ್ನು ಪ್ರಶ್ನಿಸಿದಾಗ ಗುಂಡು ಹಾರಿಸಿದ್ದಾನೆ ಎಂದು ಎದುರುದಾರರು ದೂರಿದ್ದಾರೆ. ಈ ಸಂಬ0ಧ ಉಪನಗರ ಠಾಣೆಯಲ್ಲಿ ದೂರು- ಪ್ರತಿ ದೂರು ದಾಖಲಾಗಿವೆ. ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಯುಕ್ತರು ಶಶಿಕುಮಾರ ತಿಳಿಸಿದರು.
ವಿದ್ಯಾನಗರಿಯಲ್ಲಿ ಮೊಳಗಿದ ಗುಂಡಿನ ಸದ್ದು
You Might Also Like
ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars
Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…
ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream
Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…
ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items
Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…