23.9 C
Bangalore
Friday, December 6, 2019

ದೇಶಕ್ಕಾಗಿ ಆರೆಸ್ಸೆಸ್ ಮನೆಯ ಒಂದು ನಾಯಿಯೂ ಸತ್ತಿಲ್ಲ

Latest News

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಎನ್​ಕೌಂಟರ್​ಗೆ ದೇಶಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ: ಪೊಲೀಸರ ಕ್ರಮಕ್ಕೆ ಶ್ಲಾಘನೆ

ಹೈದರಾಬಾದ್​​: ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ದಿಶಾ ರೆಡ್ಡಿ ಗ್ಯಾಂಗ್ ರೇಪ್​ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವುದಕ್ಕೆ ದೇಶದಾದ್ಯಂತ...

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸದ್ದಿಲ್ಲದೆ ಪ್ರಚಾರಕ್ಕೆ ಅಣಿಯಾಗಿರುವ ಲೋಕಸಭೆ ಕಾಂಗ್ರೆಸ್ ನಾಯಕ
ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಗುರುಮಠಕಲ್ನಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು.

ಎಪಿಎಂಸಿ ಆವರಣದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆರಂಭಿಸಿದ ಡಾ.ಖರ್ಗೆ ಮೊಗದಲ್ಲಿ ಒಂದು ಕ್ಷಣ ಭಾವುಕತೆ ಎದ್ದು ಕಂಡಿತ್ತಾದರೂ ಒಳಗೆ ನುಂಗಿಕೊಂಡು ನಿಮ್ಮ ಆಶೀರ್ವಾದ ನನಗಿರಲಿ ಎಂದು ಕೋರಿದರು. ದೇಶಕ್ಕಾಗಿ ಪ್ರಾಣ ಬಲಿದಾನಗೈದ ಏಕೈಕ ಪಕ್ಷ ಕಾಂಗ್ರೆಸ್. ಆರ್ಎಸ್ಎಸ್ ಮನೆಯವರ ಒಂದು ನಾಯಿಯೂ ಸತ್ತಿಲ್ಲ. ದೇಶಕ್ಕಾಗಿ ನಮ್ಮ ಪಕ್ಷದ ಅನೇಕ ನೇತಾರರು ಶೂಲಕ್ಕೇರಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಪ್ರಧಾನಿ ನರೇಂದ್ರ ಮೋದಿಗೆ ಹೆದರೋದಿಲ್ಲ. ಅಭಿವೃದ್ಧಿ ಕೆಲಸ ಮಾಡಿದ ನನಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಮತದಾರರು ಶಕ್ತಿ ತುಂಬಿದ್ದಾರೆ. ಮುಂದೆಯೂ ತುಂಬಲಿದ್ದಾರೆ. ಕಾರ್ಯಕರ್ತರ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ನಿಮ್ಮ ಬಲ ಜತೆಗಿದ್ದರೆ ಯಾರಿಗೂ ಹೆದರುವ ಅಗತ್ಯವಿಲ್ಲ ಎಂದರು.

ಸಂವಹನ ಕೊರತೆಯಿಂದ ಸಭೆ ನೀರಸ: ಮನದಾಳದ ಮಾತುಗಳನ್ನಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಗುರುಮಠಕಲ್ನಿಂದಲೇ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅಣಿಯಾಗುವ ಹುಮ್ಮಸ್ಸಿನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಖಾಲಿ ಕುರ್ಚಿಗಳ ಸ್ವಾಗತದಿಂದ ಒಂದು ಕ್ಷಣ ವಿಚಲಿತಗೊಂಡಂತೆ ಕಂಡರು. ಭಾಷಣದಲ್ಲಿ ಅವರೇ ಹೇಳಿದಂತೆ ಮೂರು ಬಾರಿ ಸಭೆಗೆ ದಿನಾಂಕ ನಿಗದಿಗೊಳಿಸಿ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದರೆ ಕೊನೆಗೂ ಭಾನುವಾರ ಸಭೆ ನಿಶ್ಚಿಯಿಸಿದ್ದರಂತೆ. ಸಭೆ ಕರೆಯಿರಿ ಎಂದು ಸ್ಥಳೀಯ ಮುಖಂಡರಿಗೆ ಖರ್ಗೆ ಸೂಚನೆ ನೀಡಿದ್ದರು. ಖರ್ಗೆ ಬರುತ್ತಾರೆಂದರೆ ಅಭಿಮಾನಿಗಳು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಸೇರುತ್ತಾರೆ. ಆದರೆ ಭಾನುವಾರ ಉದ್ಘಾಟನೆಯೇ ಕಾಣದ ಎಪಿಎಂಸಿ ಆವರಣದ ಓಪನ್ ಬಿಲ್ಡಿಂಗ್ ಒಂದರಲ್ಲಿ ಕಾಟಾಚಾರಕ್ಕೆ ಎಂಬಂತೆ ಒಂದಿಷ್ಟು ಕಾರ್ಯಕರ್ತರನ್ನು ಕರೆತಂದಿದ್ದ ಸ್ಥಳೀಯ ಮುಖಂಡರು ಹಾಗೋ ಹೀಗೋ ಸಭೆ ಮುಗಿಸಿಬಿಟ್ಟರು. ರಾಜಕೀಯ ಜೀವನ ಕಲ್ಪಿಸಿದ ಗುರುಮಠಕಲ್ ಕ್ಷೇತ್ರದ ಕಾರ್ಯಕರ್ತರೊಂದಿಗೆ ಒಂದಿಷ್ಟು ಲೋಕಾಭಿರಾಮವಾಗಿ ಮಾತನಾಡುವ ಮನಸ್ಸಿದ್ದರೂ ಜನರೇ ಇಲ್ಲದ್ದನ್ನು ಕಂಡ ಕೂಡಲೇ ಕೇಂದ್ರ ಸರ್ಕಾರದ ವಿರುದ್ಧ ಒಂದಿಷ್ಟು ಆಕ್ರೋಶ ವ್ಯಕ್ತಪಡಿಸಿ ಭಾಷಣ ಮುಗಿಸಿದರು.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...