More

    ಬೆಂಗಳೂರು ಬಿಲ್ಲವ ಅಸೋಸಿಯೇಶನ್‌ನಿಂದ ಗುರುಜಯಂತಿ ಆಚರಣೆ

    ಬೆಂಗಳೂರು: ಬಿಲ್ಲವ ಅಸೋಸಿಯೇಶನ್ ಬೆಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಆಚರಣೆ ಹಾಗೂ ವಿದ್ಯಾರ್ಥಿವೇತನ ವಿತರಣೆ ಭಾನುವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದ ದೇವಕಿ ಆನಂದ ಸುವರ್ಣ ಸಭಾಭವನದಲ್ಲಿ ನಡೆಯಿತು.


    ಯುವಜನ ಸೇವೆ ಹಾಗೂ ರೇಷ್ಮೆ ಕೃಷಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಕಾರ್ಯಕ್ರಮ ಉದ್ಘಾಟಿಸಿ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಉಚಿತ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಿ, ವಿದ್ಯಾಭ್ಯಾಸಕ್ಕೆ ಒತ್ತುಕೊಡುತ್ತಿರುವುದು ಶ್ಲಾಘನೀಯ ಎಂದರು.


    ಡಾ.ಎಂ.ಓ.ಮಮತೇಶ ಕಡೂರು ಬರೆದ ‘ದಿವ್ಯಚೇತನ ಶ್ರೀ ನಾರಾಯಣ ಗುರುದೇವ ಪುಸ್ತಕ’, ಬಿಲ್ಲವ ಅಸೋಸಿಯೇಶನ್ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರವಿರುವ ಕೀಚೈನ್ ಬಿಡುಗಡೆಗೊಳಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಂಘದ ಹಿರಿಯ ಸದಸ್ಯ ಎನ್.ಗೋಪಾಕೃಷ್ಣ ಉಪನ್ಯಾಸ ನೀಡಿದರು. ಎಸ್.ಎಚ್.ಸಯ್ಯದ್ ನಾರಾಯಣಗುರುಗಳ ಸಮಾಜ ಸುಧಾರಣೆ ಬಗ್ಗೆ ಪ್ರವಚನ ನೀಡಿದರು.


    ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ನಾರಾಯಣಗುರು ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಡಾ.ಗೋವಿಂದಬಾಬು ಪೂಜಾರಿ, ಸಂಘದ ಹಿರಿಯ ಉಪಾಧ್ಯಕ್ಷ ಭಾಸ್ಕರ್ ಸಿ. ಅಮೀನ್, ಉಪಾಧ್ಯಕ್ಷ ಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್, ಕೋಶಾಧಿಕಾರಿ ವಿ.ಗೋಪಾಲ್, ಸಂಘಟನಾ ಕಾರ್ಯದರ್ಶಿ ಜೆ.ನಾರಾಯಣ ಪೂಜಾರಿ, ವಿದ್ಯಾರ್ಥಿವೇತನ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಡಿ.ಎನ್., ಪೂಜಾ ಸಮಿತಿ ಅಧ್ಯಕ್ಷರಾದ ಯು.ಸಂತೋಷ್ ಬಂಗೇರ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಎಂ.ವೇದಕುಮಾರ್ ಸ್ವಾಗತಿಸಿದರು. ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ ವಂದಿಸಿದರು. ಜಲಜಾಶೇಖರ್, ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಬೆಳಗ್ಗೆ ಭಜನಾ ಕಾರ್ಯಕ್ರಮ, ಡಾ.ರಮೇಶ್ಚಂದ್ರ ಹಾಗೂ ತಂಡದವರಿಂದ ಸುಗಮಸಂಗೀತ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts