ನಾರಾಯಣ ಗುರುಗಳಿಗಿದೆ ದೇವರ ಸ್ಥಾನ : ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಬಣ್ಣನೆ

New Project (16)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಮಾಜದಲ್ಲಿ ಅನೇಕರು ಮಹಾತ್ಮರಾದರೂ ನಾರಾಯಣ ಗುರುಗಳು ದೇವರ ಸ್ಥಾನವನ್ನು ಪಡೆದುಕೊಂಡು ಲೋಕಪೂಜಿತರಾಗಿದ್ದಾರೆ. ಅವರ ವಿಚಾರಧಾರೆ ಪಾಲಿಸಿದರೆ ಇಡೀ ಜಗತ್ತು ಸ್ವಾಸ್ಥ್ಯವಾಗಿರಲು ಸಾಧ್ಯ. ನಾರಾಯಣ ಗುರುಗಳು ಮಾಡಿದ ಕ್ರಾಂತಿಗಳು ಸಂಘರ್ಷ ರಹಿತವಾಗಿದ್ದವು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.

ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಭಾನುವಾರ ಬ್ರಹ್ಮ ಶ್ರೀ ನಾರಾಯಣಗುರುಗಳ 171ನೇ ಗುರುಜಯಂತಿ ಹಾಗೂ ಕೆ.ಪದ್ಮನಾಭ ನುಡಿನಮನ, ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಎಂ. ಗುರು ಸಂದೇಶ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ಮಾತನಾಡಿದರು. ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ದಿ.ಕೆ.ಪದ್ಮನಾಭ ವಾಣಿಂಜರಿಗೆ ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಕೃಷ್ಣಪ್ಪ ಪೂಜಾರಿ ನುಡಿನಮನ ಸಲ್ಲಿಸಿದರು. ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ, ಬೆಸ್ಟ್ ೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬಿಲ್ಲವ ಮಹಿಳಾ ವೇದಿಕೆ ಮಾಜಿ ಅಧ್ಯಕ್ಷೆ ವಿನೋದಿನಿ ರಾಮಪ್ಪ ವೈಯಕ್ತಿಕವಾಗಿ ವಿದ್ಯಾರ್ಥಿ ವೇತನ ನೀಡಿದರು.

ಲೋಕಾಯುಕ್ತ ನಿವೃತ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ.ಬಂಗೇರ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಸಂಘದ ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್ ಮೊದಲಾದವರಿದ್ದರು. ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೀಶ್ ಎಚ್.ಕೋಟ್ಯಾನ್ ಸ್ವಾಗತಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು.

ಸಾಧಕರಿಗೆ ಸನ್ಮಾನ

ನಿವೃತ್ತ ಪ್ರಾಂಶುಪಾಲ ಪ್ರೊ.ಕೃಷ್ಣಪ್ಪ ಪೂಜಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಸುರೇಶ್ ಪೂಜಾರಿ, ಉಜಿರೆ ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ.ವಿಶ್ವನಾಥ, ಶೈಕ್ಷಣಿಕ ಸಾಧಕರಾದ ಸಾತ್ವಿಕ್ ಎಸ್.ಪೂಜಾರಿ ಹೊಸಂಗಡಿ, ಪ್ರಾರ್ಥನಾ ಎಚ್.ಕೆ., ಸುಪ್ರಿಯಾ ಎಸ್., ಆಕರ್ಷ ಕೆ., ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧಕಿ ಅಪೇಕ್ಷಾ ಎನ್.ಎಸ್., ಚಿತ್ರನಟ ದೀಕ್ಷಿತ್ ಅಂಡಿಂಜೆ ಅವರನ್ನು ಸನ್ಮಾನಿಸಲಾಯಿತು. ಸುಮಾರು 200 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net