More

    ಗುರುವಿನ ಸ್ಮರಣೆಯಿಂದ ಜೀವನ ಸಾರ್ಥಕ

    ಸಿಂಧನೂರು: ಕಲಿಸಿದ ಗುರುವಿನ ಸ್ಮರಣೆಯಿಂದ ನಮ್ಮ ಜೀವನ ಸಾರ್ಥಕ ಆಗಲಿದೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

    ನಗರದ ಪಿಡಬ್ಲ್ಯಡಿ ಕ್ಯಾಂಪ್‌ನ ಚನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸರ್ಕಾರಿ ಜೂನಿಯರ್ ಕಾಲೇಜ್‌ನಲ್ಲಿ 1975-76 ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಹಾಗೂ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವಿಜ್ಞಾನ-ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ, ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆ ದಿನಗಳನ್ನು ಮೆಲಕು ಹಾಕುವಂಥ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂಥ ಕಾರ್ಯಕ್ರಮ ಶ್ಲಾಘನೀಯ ಎಂದರು.

    ನಿವೃತ್ತ ಶಿಕ್ಷಕ ಟಿ.ಅಯ್ಯಪ್ಪ ಮಾತನಾಡಿ, ನಮ್ಮ ಕೈಯಲ್ಲಿ ಕಲಿತು ಇಂದು ಉನ್ನತ ಹುದ್ದೆ ಅಲಂಕರಿಸಿರುವುದು ಗುರುವಿಗೆ ನೀಡಿದ ಗೌರವವಾಗಿದೆ. ನಾವು ಕಲಿಸಿದ ಶಿಕ್ಷಣ ಸಮಾಜಕ್ಕೆ ಉಪಯೋಗವಾದರೆ ಅದುವೇ ಗುರುವಿಗೆ ಸಿಗುವ ದೊಡ್ಡ ಸ್ಥಾನವಾಗಿದೆ. ರಾಜಕೀಯ, ಶಿಕ್ಷಣ, ಆರೋಗ್ಯ ಹೀಗೆ ನಾನಾ ಕ್ಷೇತ್ರದಲ್ಲಿ ನಮ್ಮ ವಿದ್ಯಾರ್ಥಿಗಳಿದ್ದಾರೆ. ಅವರನ್ನು ನೋಡಿದಾಗ ನಮ್ಮ ಸೇವೆ ಸಾರ್ಥಕವಾಗುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts