

ವಿಜಯವಾಣಿ ಸುದ್ದಿಜಾಲ ಉಡುಪಿ
ಧರ್ಮದ ಹೆಸರಿನಲ್ಲಿ ಯುವಕರು ದಾರಿ ತಪ್ಪುತ್ತಿದ್ದಾರೆ. ನಾರಾಯಣಗುರುಗಳು ಧರ್ಮ ಬಿಡದೆ ದೇವಸ್ಥಾನ, ಮಂದಿರ ಸ್ಥಾಪನೆ ಮಾಡಿದ್ದಾರೆ. ಧರ್ಮ, ಜಾತಿ ಹಂಗಿಲ್ಲದೆ ಎಲ್ಲರೂ ಒಂದಾಗುವ ಆವಶ್ಯಕತೆಯಿದೆ. ಗುರುಮಂದಿರಗಳ ಪಕ್ಕದಲ್ಲಿ ಗ್ರಂಥಾಲಯ ಸ್ಥಾಪಿಸಬೇಕು. ಮಕ್ಕಳಿಗೆ ಲೋಕಜ್ಞಾನದ ಅರಿವು ಮೂಡಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.
ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಪ್ರಯುಕ್ತ ಭಾನುವಾರ ಬನ್ನಂಜೆಯ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರು ಸಂದೇಶ ಸಾಮರಸ್ಯ ಜಾಥಾ ಸಮಾರೋಪದಲ್ಲಿ ಮಾತನಾಡಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನಾರಾಯಣಗುರುಗಳು ನಮಗೆ ಆದರ್ಶ. ರಕ್ತಕ್ರಾಂತಿ ಇಲ್ಲದೆ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದಿದ್ದಾರೆ. ನಾರಾಯಣಗುರುಗಳ ಸಂದೇಶ ಮುಂದಿನ ತಲೆಮಾರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜಿಲ್ಲಾ ಬಿಲ್ಲವ ಯುವವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಎಂ.ಪೂಜಾರಿ ಪ್ರಸ್ತಾವನೆಗೈದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಜಿಲ್ಲಾ ಮಹಿಳಾ ಮಂಡಲ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಮಹಿಳಾ ಬಳಗ ಸಂಚಾಲಕಿ ಶಿಲ್ಪಾ ಜಿ.ಸುವರ್ಣ, ನ್ಯೂರೋ ಸರ್ಜನ್ ಡಾ.ವಿನೋದ್ ಕುಮಾರ್, ಸೂರತ್ನ ಓಪುಲ ಸಾಫ್ಟ್ವೇರ್ನ ಸಿಇಒ ಸುಭಾಸ್ ಸಾಲ್ಯಾನ್, ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಮಣಿಪಾಲ ಆಡಳಿತಾಧಿಕಾರಿ ಶಿನೋದ್ ಟಿ.ಆರ್., ತೋನ್ಸೆ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಜತ್ತನ್, ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು. ಯುವವೇದಿಕೆ ಉಪಾಧ್ಯಕ್ಷ ಮಹೇಶ್ ಸ್ವಾಗತಿಸಿದರು. ದಯಾನಂದ ಉಗ್ಗೆಲ್ಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ‘ಗುರು ಸಂದೇಶದ ಸಾಮರಸ್ಯ ಜಾಥಾ’ಕ್ಕೆ ಬನ್ನಂಜೆ ಬಿಲ್ಲವ ಸೇವಾ ಸಂದಲ್ಲಿ ಶಾಸಕ ಯಶ್ಪಾಲ್ ಎ.ಸುವರ್ಣ ಚಾಲನೆ ನೀಡಿದರು. ವಾಜಿ ಶಾಸಕ ಕೆ.ರುಪತಿ ಭಟ್, ಉದ್ಯಮಿ ಪ್ರಸಾದ್ರಾಜ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಸವಾಜಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ.ಪೂಜಾರಿ, ಬನ್ನಂಜೆ ಬಿಲ್ಲವ ಸಂದ ಅಧ್ಯಕ್ಷ ವಾಧವ ಬನ್ನಂಜೆ ಉಪಸ್ಥಿತರಿದ್ದರು. ಜಾಥಾ ಬನ್ನಂಜೆಯಿಂದ ಉಡುಪಿ ಸಿಟಿ ಬಸ್ ನಿಲ್ದಾಣ, ಕೋರ್ಟ್ ರೋಡ್, ಜೋಡುಕಟ್ಟೆ, ಬ್ರಹ್ಮಗಿರಿ, ಅಂಬಲಪಾಡಿ ಬೈಪಾಸ್, ಕರಾವಳಿ ಬೈಪಾಸ್, ಅಂಬಾಗಿಲು, ಗುಂಡಿಬೈಲು, ಕಲ್ಸಂಕ ವಾರ್ಗವಾಗಿ ಬನ್ನಂಜೆ ತಲುಪಿತು.